ಪ್ರಜಾ ಸೇವಾ ಆಂದೋಲನ: ಉರಿ ಬಿಸಿಲಿನಲ್ಲಿ ಜನರು, ತಣ್ಣನೆಯ ನೆರಳಡಿ ಜನಪ್ರತಿನಿಧಿಗಳು, ಅಧಿಕಾರಿಗಳು: ಅರ್ಜಿ ಸಲ್ಲಿಸಲು ಬಿಸಿಲಿನಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತ ಜನರು

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ಅವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕೋರಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಲಿಖಿತ ಅರ್ಜಿಗಳನ್ನು ಸಲ್ಲಿಸಿದರು.

ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲು ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿತ್ತು. ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಆಗಮಿಸಿದ್ದ ಜನರು ಆಯಾ ಇಲಾಖೆಗಳ ಕೌಂಟರ್‌ಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಅರ್ಜಿ ಸಲ್ಲಿಸುತ್ತಿದ್ದರು.

ಆದರೆ, ಕೌಂಟರ್ ಗಳ ಬಳಿ ಸಾರ್ವಜನಿಕರಿಗೆ ಕನಿಷ್ಠ ನೆರಳಿನ ವ್ಯವಸ್ಥೆಯನ್ನೂ ಕಲ್ಪಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು. ಒಂದೆಡೆ ಬಿಸಿಲಿನ ತಾಪಕ್ಕೆ ಜನರು ಬಸವಳಿಯುತ್ತಾ ಸರತಿ ಸಾಲಿನಲ್ಲಿ ನಿಂತು ಅರ್ಜಿ ಸಲ್ಲಿಸುತ್ತಿದ್ದರೆ, ಮತ್ತೊಂದೆಡೆ ಶಾಸಕರು ಹಾಗೂ ಅಧಿಕಾರಿಗಳು ಪೆಂಡಾಲ್‌ನ ನೆರಳಿನಲ್ಲಿ ಕುಳಿತು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸುತ್ತಿದ್ದ ದೃಶ್ಯ ಕಂಡುಬಂತು.

ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನದಲ್ಲೇ ಸಾರ್ವಜನಿಕರು ಬಿಸಿಲಿನಲ್ಲಿ ನಿಂತು ಪರದಾಡುವಂತಾಗಿದ್ದು ವಿಪರ್ಯಾಸದ ಸಂಗತಿಯಾಗಿದೆ. ಜನರ ಸಮಸ್ಯೆ ಆಲಿಸುವ ಕಾರ್ಯಕ್ರಮದಲ್ಲಿ ಜನರಿಗೆ ನೆರಳಿನ ವ್ಯವಸ್ಥೆ ಕಲ್ಪಿಸುವ ಕನಿಷ್ಠ ಕಾಳಜಿಯನ್ನೂ ವಹಿಸದಿರುವುದು ಆಯೋಜಕರ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮೂಡಿಸಿದೆ.

ಜನಸೇವೆಯ ಹೆಸರಿನಲ್ಲಿ ನಡೆಯುವ ಇಂತಹ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಮೊದಲ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

Ramesh Babu

Journalist

Recent Posts

ಭಗತ್ ಸಿಂಗ್ ಕ್ರೀಡಾಂಗಣ ರಸ್ತೆಯಲ್ಲಿ ಗುಂಡಿಗಳು: ವಾಹನ ಸವಾರರ ಪರದಾಟ: ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಿಲ್ಲ; ಸಾರ್ವಜನಿಕರ ಆಕ್ರೋಶ

ದೊಡ್ಡಬಳ್ಳಾಪುರ: ನಗರದ ಭಗತ್ ಸಿಂಗ್ ಕ್ರೀಡಾಂಗಣ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ದೊಡ್ಡ ಗುಂಡಿಗಳಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ…

2 minutes ago

ಹನಿ ಟ್ರ್ಯಾಪ್……….

ಇತ್ತೀಚಿನ ಭಯೋತ್ಪಾದಕ ಸುದ್ದಿಗಳು....... ಗೆಳೆಯರೊಬ್ಬರು ಕರೆ ಮಾಡಿ ಅಪರಿಚಿತ ಮಹಿಳೆಯ ಕೆಲವೇ ಸೆಕೆಂಡುಗಳ ಒಂದು ವಿಡಿಯೋ ಕಾಲ್ ಸಹಜವಾಗಿ ಸ್ವೀಕರಿಸಿದ…

8 hours ago

ಕೇಳಚಂದ್ರ ಪ್ರತಿಷ್ಠಾನದಿಂದ ಯುವಜನತೆಗೆ ಎಐ ಕೌಶಲ್ಯ ತರಬೇತಿ:*ಕೌಶಲ್ಯ ಹೊಂದಿದ ಯುವಜನತೆಗೆ ಪ್ರಮಾಣಪತ್ರ ವಿತರಿಸಿದ ಸುಜಾ ಜಾರ್ಜ್

ಕೃತಕ ಬುದ್ಧಿಮತ್ತೆ (ಎಐ) ಯುಗದಲ್ಲಿ ಕೌಶಲ್ಯವೇ ಯಶಸ್ಸಿನ ಫಾರ್ಮುಲಾ ಆಗಿದ್ದು, ಕೆಳಚಂದ್ರ ಪ್ರತಿಷ್ಠಾನ ಎಐ ಕೌಶಲ್ಯ ಕೋರ್ಸ್‌ ಆರಂಭಿಸುವ ಮೂಲಕ…

20 hours ago

ಗೂಳ್ಯ ಗ್ರಾಮಸ್ಥರ ಬಹುದಿನಗಳ ಕನಸು ನನಸು: ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ: ಸಚಿವ ಕೆ.ಎಚ್.ಮುನಿಯಪ್ಪನವರ ಅನುದಾನದಲ್ಲಿ ರಸ್ತೆ ಅಭಿವೃದ್ಧಿ

ದೊಡ್ಡಬಳ್ಳಾಪುರ: ತಾಲೂಕಿನ ಗೂಳ್ಯ ಗ್ರಾಮದ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಕೊನೆಗೂ ಚಾಲನೆ ದೊರೆತಿದೆ. ಗೂಳ್ಯ ಮುಖ್ಯ ರಸ್ತೆಯಿಂದ…

1 day ago

ಕನಸವಾಡಿ ಶನಿಮಹಾತ್ಮಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಜಿ.ಸತ್ಯನಾರಾಯಣಸ್ವಾಮಿ ನಿಧನ

ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ಜಿ. ಸತ್ಯನಾರಾಯಣಸ್ವಾಮಿ (74) ಅವರು ಗುರುವಾರ ರಾತ್ರಿ…

1 day ago

ಯುವ ಸಂಸತ್ತು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಲಾ ಕಾಲೇಜಿನ ಪುನೀತ್ ಕುಮಾರ್‌ಗೆ ಪ್ರಥಮ ಸ್ಥಾನ; ರಾಜ್ಯಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿ ಪುನೀತ್ ಕುಮಾರ್ ಪ್ರಥಮ…

2 days ago