ಅಂತಾರಾಷ್ಟ್ರೀಯ ಪ್ರಯಾಣ ಮಾಡುವಾಗ ಎಲ್ಲರ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಪಕ್ಷ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ. ವಿಪರ್ಯಾಸವೆಂದರೆ ಕೇಂದ್ರ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ ಎಂದು ಹೇಳಿದ್ದಾರೆ.
ತಮಗೂ ರೇವಣ್ಣನ ಕುಟುಂಬಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದರು. ರಾಜಕೀಯ ಹಾಗೂ ಪಾಪ ಕೃತ್ಯಗಳನ್ನು ಅವರೆಲ್ಲರೂ ಒಟ್ಟಿಗೆ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ. ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲು ಒಂದು ಸರ್ಕಾರವಾಗಿ ನಾವು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ ಎಂದರು.
ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…