ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.
ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಲಾಗಿದೆ. ಇಂದಿನಿಂದ ಜೀವನಪರ್ಯಂತ ಸೆರೆಮನೆ ವಾಸದಲ್ಲಿ ಇರಲಿರುವ ಪ್ರಜ್ವಲ್ ರೇವಣ್ಣ.
ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.
ಐಪಿಸಿ ಸೆಕ್ಷನ್ 376(2)(k) ಅಡಿ ತೀರ್ಪು ಪ್ರಕಟಿಸಲಾಗಿದ್ದು, ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ಪ್ರಜ್ವಲ್ ಅನುಭವಿಸಬೇಕಿದೆ. ಅತ್ಯಾಚಾರದ 2 ಸೆಕ್ಷನ್ಗಳ ಅಡಿ ಒಟ್ಟು 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಲ್ಲಿ 7 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು ಎಂದು ಜಡ್ಜ್ ತೀರ್ಪಿನಲ್ಲಿ ತಿಳಿಸಿದ್ದಾರೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…