ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದ ಮೇಲೆ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡರ ಪದ್ಮನಾಭನಗರದ ಮನೆಯಲ್ಲಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕಚೇರಿಗೆ ಕರೆದೊಯ್ಯುತ್ತಿದ್ದಾರೆ.
ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರವೆಸಗಿದ್ದ ಸಂತ್ರಸ್ತೆಯನ್ನು ರೇವಣ್ಣ ಮತ್ತು ಇತರರು ಕಿಡ್ನಾಪ್ ಮಾಡಿದ್ದಾರೆ. ಈ ಮೂಲಕ ಸಂತ್ರಸ್ತೆಗೆ ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಈ ಕಾರಣಕ್ಕೆ ರೇವಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಚೇರಿಗೆ ಕರೆದೊಯ್ದು ಬಂಧಿಸುವ ಕಾನೂನು ಪ್ರಕ್ರಿಯೆ ನಡೆಸಲಾಗುವುದು’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಚೇರಿಯಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಇದಾದ ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…