ರಾಜ್ಯ ಕಾಂಗ್ರೆಸ್ ಪಕ್ಷವು ಪೆನ್‌ಡ್ರೈವ್ ಪ್ರಕರಣವನ್ನು ಬೆಳಕಿಗೆ ತಂದು ಜೆಡಿಎಸ್ ಪಕ್ಷಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಒತ್ತಾಯಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ(ಟಿಬಿ ವೃತ್ತ) ಬಳಿ ಪೆನ್ ಡ್ರೈವ್ ಘಟನೆಯ ವಿರುದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಪ್ರಜಾಪ್ರಭುತ್ವದ ವ್ಯವಸ್ಥೆಯೇ ತಲೆತಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷವು ಮಾಡಲು ಹೊರಟಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರವು ಪೆನ್ ಡ್ರೈವ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿದೆ ಈ ಘಟನೆಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದ್ದು, ಸಾಕ್ಷಿಗಳನ್ನು ತಮ್ಮ ಸರಕಾರದ ಪರವಾಗಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಾರೆ. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಸರಕಾರದ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆದುಕೊಳ್ಳುವ ಸಂಶಯವಿದೆ. ಈ ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವಂತೆ ಪೆನ್‌ಡ್ರೈವ್ ಬಿಡುಗಡೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಅವರು ಕೂಡಲೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಜೊತೆಗೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಡಿಕೆಶಿ ಆಡಿಯೋ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಈ ಘಟನೆಯಲ್ಲಿ ಭಾಗವಹಿಸಿದವರು ಯಾರೇ ಆಗಲಿ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಿ ಅದು ಬಿಟ್ಟು ವಿನಾಕಾರಣ ಸಂತ್ರಸ್ತ ಮಹಿಳೆಯನ್ನು ಬೀದಿಗೆ ತಂದು ಅವಮಾನ ಮಾಡಲು ಹೊರಟಿದ್ದು ಮಹಿಳೆಯರಿಗೆ ಸರಕಾರ ಮಾಡಿದ ಅವಮಾನವಾಗಿದೆ. ಎಸ್ಐಟಿಯ ಕೆಲವು ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಜೆಡಿಎಸ್ ಪಕ್ಷವನ್ನು ಮುಗಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ, ಜೆಡಿಎಸ್ ಮುಖಂಡ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…