ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪೆನ್ ಡ್ರೈವ್ ಸೃಷ್ಟಿ ಮಾಡಿದ್ದೇ ಡಿಕೆಶಿ: ಎಸ್ಐಟಿ ಸರ್ಕಾರದ ಕೈಗೊಂಬೆ: ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜೆಡಿಎಸ್ ಒತ್ತಾಯ

ರಾಜ್ಯ ಕಾಂಗ್ರೆಸ್ ಪಕ್ಷವು ಪೆನ್‌ಡ್ರೈವ್‌ ಪ್ರಕರಣವನ್ನು ಬೆಳಕಿಗೆ ತಂದು ಜೆಡಿಎಸ್ ಪಕ್ಷಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಒತ್ತಾಯಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ(ಟಿಬಿ ವೃತ್ತ) ಬಳಿ ಪೆನ್ ಡ್ರೈವ್ ಘಟನೆಯ ವಿರುದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ‌ ಜಿಲ್ಲಾ ಜೆಡಿಎಸ್‌ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಪ್ರಜಾಪ್ರಭುತ್ವದ ವ್ಯವಸ್ಥೆಯೇ ತಲೆತಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷವು ಮಾಡಲು ಹೊರಟಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವು ಪೆನ್ ಡ್ರೈವ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿದೆ ಈ ಘಟನೆಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದ್ದು, ಸಾಕ್ಷಿಗಳನ್ನು ತಮ್ಮ ಸರಕಾರದ ಪರವಾಗಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಾರೆ‌. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಸರಕಾರದ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆದುಕೊಳ್ಳುವ ಸಂಶಯವಿದೆ. ಈ ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವಂತೆ ಪೆನ್‌ಡ್ರೈವ್ ಬಿಡುಗಡೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಅವರು ಕೂಡಲೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಜೊತೆಗೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಡಿಕೆಶಿ ಆಡಿಯೋ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಈ ಘಟನೆಯಲ್ಲಿ ಭಾಗವಹಿಸಿದವರು ಯಾರೇ ಆಗಲಿ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಿ ಅದು ಬಿಟ್ಟು ವಿನಾಕಾರಣ ಸಂತ್ರಸ್ತ ಮಹಿಳೆಯನ್ನು ಬೀದಿಗೆ ತಂದು ಅವಮಾನ ಮಾಡಲು ಹೊರಟಿದ್ದು ಮಹಿಳೆಯರಿಗೆ ಸರಕಾರ ಮಾಡಿದ ಅವಮಾನವಾಗಿದೆ. ಎಸ್ಐಟಿಯ ಕೆಲವು ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ‌ ಕೆಲಸ ಮಾಡುತ್ತಿದ್ದಾರೆ ಜೆಡಿಎಸ್‌ ಪಕ್ಷವನ್ನು ಮುಗಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ‌ ಎಂದು ಆರೋಪಿಸಿದರು.

ಈ ವೇಳೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ, ಜೆಡಿಎಸ್ ಮುಖಂಡ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

11 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

12 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

14 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

15 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

17 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

22 hours ago