Categories: ಕೋಲಾರ

ಪ್ರಜ್ವಲ್ ವಿರುದ್ದ ಮೇ.30ರ ಹೋರಾಟದ ಪೋಸ್ಟರ್ ಬಿಡುಗಡೆ

ಕೋಲಾರ: ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ಮಹಿಳೆಯರ ಘನತೆಯನ್ನು ಉಳಿಸುವಂತೆ ಆಗ್ರಹಿಸಿ ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟದಿಂದ ಮೇ 30ರಂದು ಹಾಸನದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಬಹಿರಂಗ ಸಭೆ ಕುರಿತಂತೆ ನಗರದ ನಚಿಕೇತ ನಿಲಯದಲ್ಲಿ ಜನಪರ ಚಳವಳಿಗಳ ಒಕ್ಕೂಟದ ಪದಾಧಿಕಾರಿಗಳು ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜನಪರ ಚಳುವಳಿಗಳ ಒಕ್ಕೂಟ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದ ಗೌರವವನ್ನು ಕಳೆದಿರುವ ಘಟನೆ ಇದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದಲೂ ಮಹಿಳಾ, ದಲಿತ, ಕಾರ್ಮಿಕ, ರೈತ, ಅಲ್ಪಸಂಖ್ಯಾತ, ಹಿಂದುಳಿದ, ಲಿಂಗತ್ವ ಅಲ್ಪಸಂಖ್ಯಾತ, ವಿದ್ಯಾರ್ಥಿಗಳು ಹೆಚ್ಚಿನ ರೀತ ಭಾಗವಹಿಸಲಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು. ಈ ನೀಚ ಕೃತ್ಯವನ್ನು ಸೆರೆಹಿಡಿದವರು, ನಂತರ ಆ ವಿಡಿಯೋಗಳನ್ನು ಪೆನ್ ಡ್ರೈವ್‌ಗಳ ಮೂಲಕ ಹಂಚಿಕೆ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇದೊಂದು ಅಂತಾರಾಷ್ಟ್ರೀಯ ಮಟ್ಟದ ಹೀನ ಕೃತ್ಯವಾಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳಿಗೆ ಕಠಿಣ ಶಿಲ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಾಂತಮ್ಮ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ನೂರಾರು ಮಹಿಳೆಯರಿಗೆ ಅನ್ಯಾಯವಾಗಿದ್ದು, ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ, ಆರೋಪಿಯನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳುವ ಬದಲಾಗಿ ಸಂತ್ರಸ್ತರನ್ನೇ ಟಾರ್ಗೆಟ್‌ ಮಾಡಲಾಗುತ್ತಿದೆ. ಅವರನ್ನು ಅಪರಾಧಿ ಎಂಬಂತೆ ಬಿಂಬಿಸಲಾಗುತ್ತಿದೆ. ಅವರ ಕುಟುಂಬಕ್ಕೆ ರಾಜಕೀಯ ಅಧಿಕಾರದಿಂದ ದೂರವಿಡಬೇಕು. ಈ ನಿಟ್ಟಿನಲ್ಲಿ ಮೇ. 30 ರಂದು ಬೃಹತ್ ಹೋರಾಟವನ್ನು ನಡೆಸುವ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಡ ಹೇರಲು ಜನಪರ ಸಂಘಟನೆಗಳು ತೀರ್ಮಾನಿಸಿವೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ವಿ.ಗೀತಾ ಎಂ.ವಿಜಯಕೃಷ್ಣ, ಭೀಮರಾಜ್, ಮಹಮ್ಮದ್ ಮುಸ್ತಫಾ, ಮಂಜುನಾಥ್, ಸಭೀನಾ ಇದ್ದರು

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

2 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

3 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

16 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

16 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

17 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

23 hours ago