ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಂಗಳವಾರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಾಗರೀಕ ಹೋರಾಟ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸುವಾಗ ಸ್ಥಳಕ್ಕೆ ಬಾರದ ತಹಶಿಲ್ದಾರ ಚೆನ್ನಮಲ್ಲಪ್ಪ ಘಂಟಿ ವಿರುದ್ಧ ಕ್ರಾಂತಿ ಮಂತ್ರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿರುವ ಟೋಲ್ ಗೇಟ್,ಅಂಬೇಡ್ಕರ್ ವೃತ್ತ ಕಾಮಗಾರಿ ನವೀಕರಣ,ಹಳೆ ಪ್ರವಾಸಿ ಮಂದಿರಕ್ಕೆ ಶಾಸಕರ ಹೆಸರು ನಾಮಫಲಕ ಹಾಕಿದ ಬೋರ್ಡ್,ವಿವಿಧ ಬೇಡಿಕೆಗಳ ಸೇರಿದಂತೆ,ಎಲ್ಲಾ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಸೇರಿಕೊಂಡು ಹೋರಾಟ ಮಾಡಿದರು.
ಬೇಡಿಕೆಗಳನ್ನು ಸ್ಥಳೀಯ ಶಾಸಕಿಗೆ ಸಂಭಂದಿಸಿದ, ಹಲವಾರು ಸಮಸ್ಯೆಗಳು ಇರುವುದರಿಂದ ಶಾಸಕಿಯ ಅಣತಿಯಂತೆ ಕೆಲಸ ಮಾಡುವ ತಾಲೂಕಿಗೆ ದಂಡವಾದ ದಂಡಾಧಿಕಾರಿ ಮತ್ತು ಸಿಬ್ಬಂದಿಗಳು ಹೋರಾಟ ಸ್ಥಳಕ್ಕೆ ಆಗಮಿಸದೆ,ಪಲಾಯನ ಮಾಡಿ ಹೋರಾಟಗಾರರಿಗೆ ಅವಮಾನಿಸಿದ್ದಾರೆ ಎಂದರು.
ಅಧಿಕಾರಿಗಳು ಬರಲೇ ಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದು,ಅಂಬೇಡ್ಕರ್ ಕ್ರಾಂತಿ ಗೀತೆ ಆಡುವ ಮೂಲಕ ರಸ್ತೆ ಬಂದ್ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರತಿಭಟನೆ ಸ್ಥಳಕ್ಕೆ ದೌಡಾಸಿದ ಸಿಪಿಐ,ಪಿಎಸ್ಐ ಇನ್ನೂ ಕೆಲ ಅಧಿಕಾರಿಗಳು ಬಂದು ಸ್ವಾಂತನ ಹೇಳಿದ ಮೇಲೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಡಲಾಯಿತು.
ಈ ಸಂದರ್ಭದಲ್ಲಿ ಮನುಮಂತ ಮನ್ನಾಪುರಿ, ಆದರ್ಶ ನಾಯಕ, ಹನುಮಂತ ಕಾಕರಗಲ್, ವಿಶ್ವನಾಥ ಬಲ್ಲಿದವ, ಭೀಮನಗೌಡ, ಕ್ರಾಂತಿಕುಮಾರ್, ಶಾಂತಕುಮಾರ ಹೊನ್ನುಟಗಿ, ವೆಂಕನಗೌಡ ವಕೀಲ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…