ಬ್ರಿಟೀಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೋರಾಟ ಮುಂದುವರೆಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಮತ್ತು “ನಮ್ಮ ನಡಿಗೆ ಸಂವಿಧಾನದ ಕಡೆಗೆ” ಅಭಿಯಾನವನ್ನು ಉದ್ಘಾಟಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಅವರು ಮಾತನಾಡಿದರು.
ಮನುಷ್ಯ ತಾರತಮ್ಯವನ್ನು ಆಚರಿಸುವ ಚಾತುರ್ವರ್ಣ ಮತ್ತು ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿದ್ದಲ್ಲ. ತಮ್ಮ ಸ್ವಾರ್ಥಕ್ಕಾಗಿ ಕೆಲವು ಮನುಷ್ಯರೇ ಸೃಷ್ಟಿಸಿದ್ದು. ಈ ತಾರತಮ್ಯವನ್ನು ಅಳಿಸುವುದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಉದ್ದೇಶವಾಗಿತ್ತು. ಈ ಉದ್ದೇಶಕ್ಕಾಗಿ ಹೋರಾಟ ಮುಂದುವರೆಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.
ಅಂಬೇಡ್ಕರ್ ಅವರು ಇಂತಹ ಶ್ರೇಷ್ಠ ಸಂವಿಧಾನ ಕೊಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ ಆಗುತ್ತಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.
ಅಂಬೇಡ್ಕರ್ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಸ್ವಾಭಿಮಾನದಿಂದ ನಡೆದುಕೊಳ್ಳಬೇಕು. ಸಾವಿರಾರು ವರ್ಷಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೂದ್ರ, ದಲಿತರು ಮತ್ತು ಮಹಿಳೆಯರಿಗೆ ಅಂಬೇಡ್ಕರ್ ಅವರ ಸಂವಿಧಾನ ಶಿಕ್ಷಣದ ಹಕ್ಕನ್ನು ಒದಗಿಸಿಕೊಟ್ಟಿತು. ಅದಕ್ಕೂ ಮೊದಲು ಮೇಲು ಜಾತಿಯ ಮಹಿಳೆಯರಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ ಎಂದರು.
ಈ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಯಾರಿಗೆ ಇತಿಹಾಸ ಗೊತ್ತಿರುವುದಿಲ್ಲವೋ ಅವರು ಭವಿಷ್ಯವನ್ನೂ ರೂಪಿಸಲಾರರು ಎನ್ನುವ ಅಂಬೇಡ್ಕರ್ ಅವರ ಮಾತು ನೂರಕ್ಕೆ ನೂರರಷ್ಟು ನಿಜ ಎಂದು ಹೇಳಿದರು.
ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತರ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ನಮ್ಮ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ ಎಂದರು.
ಸಂವಿಧಾನ ಬದಲಾವಣೆಯ ಕೂಗನ್ನು ಕೆಲವರು ಹಾಕುತ್ತಿದ್ದಾರೆ. ಸಂವಿಧಾನ ಬದಲಾದರೆ ನಂತರದ ಧಾರುಣ ಬದುಕನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.
ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಾಸಕ ದರ್ಶನ್ ದ್ರುವನಾರಾಯಣ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ದಲಿತ ಮುಖಂಡರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…
ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು…