ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ- ಶಿಕ್ಷಣದಿಂದ ಎಲ್ಲರ ಪ್ರತಿಭೆಗಳೂ ಹೊರ ಬರುತ್ತದೆ- ಸಿಎಂ ಸಿದ್ದರಾಮಯ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ”ವನ್ನು ಉದ್ಘಾಟಿಸಿ, ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.

ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಬ್ರಿಟಿಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದು ತಿಳಿಸಿದರು.

ನಾನು ಬಿಎಸ್ಸಿ ಓದುವಾಗ ಹೋಟೆಲ್ ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದಿದ್ದೆ ಎಂದರು.

ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದು ಹೇಳಿದರು.

ಹಿಂದೆ ಗ್ರಾಮೀಣ ಭಾಗಗಳಲ್ಲಿ ವೈದ್ಯ ಹುದ್ದೆಗಳು ಹೆಚ್ಚಿದ್ದು ವೈದ್ಯರ ಸಂಖ್ಯೆ ಕಡಿಮೆ ಇತ್ತು. ಈಗ ಪರಿಸ್ಥಿತಿ ಬದಲಾಗಿ ಖಾಲಿ ಹುದ್ದೆಗಳಿಗಿಂತ ವೈದ್ಯರ ಸಂಖ್ಯೆ ದುಪ್ಪಟ್ಟಾಗಿದೆ. ಆದ್ದರಿಂದ ಖಾಲಿಯಿರುವ ಗ್ರಾಮೀಣ ವೈದ್ಯ ಹುದ್ದೆಗಳನ್ನಷ್ಟೆ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿ ನಿಯಮಾವಳಿಗೆ ತಿದ್ದುಪಡಿ ತರುವಂತಾಯಿತು ಎಂದು ತಿಳಿಸಿದರು.

ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

2 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

4 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

15 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

15 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

17 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

1 day ago