ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು – ಸಂಘಟಿತರಾಗಬೇಕು – ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗಬೇಕು – ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್

ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗಬೇಕು ಎಂದು
ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ವಕೀಲ ಆರ್.ವಿ ಮಹೇಶ್ ಕುಮಾರ್ ಹೇಳಿದರು.

ಅಂಬೇಡ್ಕರ್ ಅವರ ರೀತಿಯಲ್ಲಿ ಯುವ ಜನಾಂಗವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರಿಂದ ದೇಶದಲ್ಲಿ ಇನ್ನೂ ಮಹತ್ತರವಾದ ಬದಲಾವಣೆಯನ್ನು ಕಾಣಬಹುದು. ಶಿಕ್ಷಣ ಮತ್ತು ಸಬಲೀಕರಣದಿಂದ ಅಸಮಾನತೆಯನ್ನು ಸಂಪೂರ್ಣವಾಗಿ ಹೋಗಲಾಡಿಸಬೇಕು. ‘ಶಿಕ್ಷಣ ಎಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು’ ಎಂದು ಹೇಳುವುದರ ಮೂಲಕ ದೇಶದಲ್ಲಿನ ಅಸಮಾನತೆ ನಿವಾರಣೆಗೆ ಶಿಕ್ಷಣವೇ ಮೂಲ ಮದ್ದು ಎಂದು ಹೇಳಿದ್ದಾರೆ.

ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ ಕೊಟ್ಟಿರುವುದು ಭಾರತದ ಸಂವಿಧಾನ. ಅಂತಹ ಸಂವಿಧಾನ ಕೊಟ್ಟಿರುವುದು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು, ಶೋಷಿತರಿಗೆ, ಹಿಂದುಳಿದವರಿಗೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿಕೊಡಬೇಕು. ಸರ್ವರು ಸ್ವಂತಂತ್ರರರು, ಸರ್ವರು ಸಮಾನರು, ಸರ್ವರಿಗೂ ಸಮಾನ ನ್ಯಾಯ, ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಬೇಕು ಎಂಬ ತತ್ವದಡಿ ಸಂವಿಧಾನವನ್ನು ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದರು ಎಂದರು.

ಸಂವಿಧಾನದಿಂದ ಕೇವಲ ಒಂದು ಜಾತಿ, ಸಮುದಾಯ, ವರ್ಗಕ್ಕೆ ಸೀಮಿತವಾಗಿಲ್ಲ, ಭಾರತದ ಕೊಟ್ಟು ಕಡೆಯ ಪ್ರಜೆಗೂ ಸಮಾನ ಅವಕಾಶ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಜ್ಞಾನ ವೃದ್ಧಿಯಿಂದ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತದೆ ಎಂಬುದು ನನ್ನ ಭಾವನೆ ಎಂದರು.

ಅಂಬೇಡ್ಕ‌ರವರ ಮೂಲಮಂತ್ರ ಹಾಗೂ ಆಶಯಗಳನ್ನು ಎಲ್ಲರೂ ಪಾಲನೆ ಮಾಡಬೇಕು. ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ಸಂಘಟಿತರಾಗಬೇಕು. ಅಂಬೇಡ್ಕರ್ ಇಲ್ಲದಿದ್ದರೆ ಶೋಷಿತರಿಗೆ ನ್ಯಾಯ ಸಿಗುತ್ತಿರಲಿಲ್ಲ ಎಂದರು.

ಬಾಬಾ ಸಾಹೇಬ್ ಅವರು ಸುಮಾರು 32 ಪದವಿಗಳನ್ನು ಅಧ್ಯಯನ ಮಾಡಿದ್ದಾರೆ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಎಷ್ಟೇ ಮಾತನಾಡಿದರು ಅದು ಕಡಿಮೆ, ಅವರ ಸಾಧನೆ ಒಂದು ಜನಾಂಗಕ್ಕೆ ಮಾತ್ರ ಸೀಮಿತ ಅಲ್ಲ, ಇಡೀ ಜಗತ್ತಿಗೆ ಅವರು ಮಾಡಿರುವ ಸಾಧನೆ ಅಗಾಧ. ಅವರು ನಡೆದ ದಾರಿಯಲ್ಲಿ ಇಂದಿನ ಯುವ ಜನಾಂಗವು ಸಾಗಬೇಕು ಎಂದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

6 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago