Categories: ರಾಜ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು- ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು. ಸಮಾಜದಲ್ಲಿ 850 ವರ್ಷಗಳ ಹಿಂದೆಯೇ ಮೌಢ್ಯಗಳನ್ನು ಬಿಟ್ಟು ವಿಚಾರವಂತಿಕೆ ಬೆಳೆಸಿಕೊಳ್ಳಬೇಕು ಎಂದು ಬಸವಾದಿ ಶರಣರು ಸಾರಿದ್ದರು. ಶಿಕ್ಷಿತರಾದ ಮೇಲೆ ವೈಜ್ಞಾನಿಕವಾಗಿ ಚಿಂತನೆ ಮಾಡುವ ಶಕ್ತಿ ಅಗತ್ಯ. ಉನ್ನತ ಶಿಕ್ಷಣ ಪಡೆದೂ ಕಂದಾಚಾರಗಳಿಗೆ ಜೋತು ಬಿದ್ದರೆ ಅವರನ್ನು ಶಿಕ್ಷಿತರು ಎಂದು ಹೇಳಾಗದು. ಸಮಾಜದ ಜೊತೆಗೆ ಸ್ಪಂದಿಸುವ ಜ್ಞಾನವಿರಬೇಕು. ಆಗ ಮಾತ್ರ ಅವರನ್ನು ಸುಶಿಕ್ಷಿತರು ಎಂದು ಕರೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸ್ವಾಮಿ ವಿವೇಕಾನಂದ ಎಜುಕೇಶನಲ್ ಇನ್‌ಸ್ಟಿಟ್ಯೂಟ್  ವಿದ್ಯಾಸಂಸ್ಥೆಯ ರಜತ ಮಹೋತ್ಸವ ಹಾಗೂ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಬರೀ ಓದು – ಬರೆಯಲು ಮಾತ್ರವಲ್ಲದೆ ಸಾಮಾಜಿಕ ವ್ಯಕ್ತಿಯಾಗಿ ಸಮಾಜದ ಜವಾಬ್ದಾರಿಯನ್ನು ಹೊರುವ, ಸಮಸ್ಯೆಗಳನ್ನು ಪರಿಹಾರ ಮಾಡುವ ಶಕ್ತಿ ವಿದ್ಯಾರ್ಥಿಗಳಿಗೆ ಬರಬೇಕು. ಮಕ್ಕಳಿಗೆ ವೈಚಾರಿಕತೆ ತುಂಬಿ ಬೆಳಸಬೇಕು ಎನ್ನುವುದನ್ನು ಪ್ರತಿಯೊಬ್ಬ ಗುರುಗಳು ಬೆಳೆಸಿಕೊಳ್ಳಬೇಕು. ಶಿಕ್ಷಕರಲ್ಲಿ ವೈಚಾರಿಕತೆ ಬಂದರೆ ಮಕ್ಕಳಿಗೆ ಕೂಡ ಅದು ಬರಲು ಸಾಧ್ಯ. ಕೇವಲ ಇಂಗ್ಲಿಷ್ ನಲ್ಲಿ ಮಾತನಾಡಿದರೆ ಅದು ಶಿಕ್ಷಣವಲ್ಲ ಎಂದರು.

ಗುರುದೇವೋಭವ ಎಂದು ಕರೆಯಲ್ಪಡುವ ಶಿಕ್ಷಕರು, ರೈತರು ಹಾಗೂ ಸೈನಿಕರನ್ನು ಹೆಚ್ಚು ಗೌರವದಿಂದ ಕಾಣುತ್ತೇವೆ. ತಂದೆತಾಯಿಗಳ ಮೇಲೂ ಶಿಕ್ಷಣ ನೀಡುವ ಹೊಣೆಯಿದೆ.  ಇಂಗ್ಲಿಷ್ ಕಲಿಯಬೇಕು, ಆದರೆ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿತರೆ ಹೆಚ್ಚು ಸುಲಭವಾಗಿ ಅರ್ಥವಾಗುತ್ತದೆ ಎಂದು ತಿಳಿಸಿದರು.

ನಮ್ಮ ಕ್ಷೇತ್ರದ ಮಕ್ಕಳು ವಿದ್ಯಾವಂತರಾದರೆ ಅದಕ್ಕಿಂತ ಸಂತೋಷ ಬೇರೆ ಯಾವುದೂ ಇಲ್ಲ. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಶಿಕ್ಷಣ ಕಡ್ಡಾಯ ಹಾಗೂ ಅದು ಮೂಲ ಭೂತ ಹಕ್ಕಾಗಿದೆ. ನೂರಕ್ಕೆ ನೂರರಷ್ಟು ಮಕ್ಕಳು ವಿದ್ಯಾವಂತರಾಗಬೇಕು. ದೇಶದಲ್ಲಿ ಕೇವಲ 76 % ಮಾತ್ರ ವಿದ್ಯಾವಂತರಿದ್ದಾರೆ . 75 ವರ್ಷಗಳಾದರೂ ಎಲ್ಲರೂ ಶಿಕ್ಷಣ ಪಡೆದಿಲ್ಲ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ಮನೆ ಮನೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದೆ. ಉಚಿತ ವಿದ್ಯುತ್, 2,000 ಸಾವಿರ ರೂ. 5 ಕೆಜಿ ಹೆಚ್ಚುವರಿ ಅಕ್ಕಿ ಕೊಡುವ ಯೋಜನೆಗಳನ್ನು ಬಡವರಿಗೆ ನೀಡುವುದು ಖರ್ಚು ಮಾಡುವ ಶಕ್ತಿ ಬರಲಿ ಎಂದು. ಸಾರ್ವತ್ರಿಕ ಮೂಲ ಆದಾಯದ ಆಧಾರದಲ್ಲಿ ಈ ಯೋಜನೆಗಳು ಜಾರಿಯಾಗಿವೆ ಎಂದು ಹೇಳಿದರು.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

3 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

5 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

5 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

7 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

11 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

23 hours ago