ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣದ ಕನಸು ನನಸಾಯಿತು. ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಕನ್ನಡಿಗರ ಅಭಿಮಾನ ಹೊಂದಬೇಕಾಗಿದೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು ರಾಜ್ಯದ ಶಾಲಾ ಕಾಲೇಜು, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸಬೇಕಾಗಿದೆ. ಕುವೆಂಪು ಅವರು 1924-25ರಲ್ಲಿ ‘ಕನ್ನಡ ರಾಷ್ಟ್ರಗೀತೆ’ ಎಂದು ನಾಡಗೀತೆಯನ್ನು ಬರೆದಿದ್ದರು. 2004 ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತವಾಗಿ ನಾಡಗೀತೆ ಮನ್ನಣೆ ನೀಡಿತು. ನಮ್ಮ ನಾಡಗೀತೆಯಲ್ಲಿ ಭಾರತ ಸರ್ವಜನಾಂಗದ ಶಾಂತಿಯ ತೋಟ ಎನ್ನುವ ಮೂಲಕ ವಿವಿಧ ಸಮುದಾಯಗಳು ಒಟ್ಟಾಗಿ ಬಾಳುತ್ತಿವೆ ಎಂದು ಕುವೆಂಪು ಸಾರಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಪಿ.ಗೋವಿಂದರಾಜು, ಎ.ಜಯರಾಮ್, ಆರ್.ಗೋವಿಂದರಾಜು, ದಾದಾಪೀರ್, ಜಿ.ಸುರೇಶ್, ವಿ.ಎಸ್.ಹೆಗಡೆ, ಕುಮಾರ್, ಉದಯಾರಾಧ್ಯ, ವೆಂಕಟರಾಜು, ಡಿ.ಶ್ರೀಕಾಂತ್, ಜಿ.ಎಂ.ನಾಗರಾಜ್, ಅಣ್ಣಯ್ಯ, ವತ್ಸಲಾ, ವೆಂಕಟೇಶರೆಡ್ಡಿ, ಗುರುರಾಜಪ್ಪ, ಎಂ.ಸಿ.ಮಂಜುನಾಥ್, ಕೋದಂಡರಾಮ್, ಮುನಿರಾಜು, ಸಫೀರ್, ನಾಗರತ್ನಮ್ಮ, ದರ್ಗಾಜೋಗಿಹಳ್ಳಿ ಮಲ್ಲೇಶ್, ನಾಗದಳ ನಟರಾಜ್, ರಹೀಮ್, ಮಹಾದೇವಪ್ಪ, ರಂಗಸ್ವಾಮಯ್ಯ ಭಾಗವಹಿಸಿದ್ದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…