ಪ್ರತಿಯೊಬ್ಬ ಕನ್ನಡಿಗ ಕನ್ನಡ ಪ್ರಜ್ಞೆಯನ್ನು ಸದಾ ಉಳಿಸಿ, ಬೆಳೆಸಿಕೊಳ್ಳಬೇಕು- ಕವಯತ್ರಿ ಎಂ.ಬಿ.ಯಶೋಧಮ್ಮ

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಕನ್ನಡದ ಪರಂಪರೆಯನ್ನು ಮತ್ತು ಅನನ್ಯತೆಯನ್ನು   ಉಳಿಸಿ, ಬೆಳೆಸುವ ಜವಾಬ್ದಾರಿಯನ್ನು ಕನ್ನಡಿಗರು  ಸಮರ್ಥವಾಗಿ ನಿರ್ವಹಿಸಬೇಕಾಗಿದೆ ಎಂದು ಕವಯತ್ರಿ ಎಂ.ಬಿ.ಯಶೋಧಮ್ಮ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬ ಕನ್ನಡಿಗ ಕನ್ನಡ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆ ಮತ್ತು ಸೃಜನಶೀಲತೆ ಉಳಿಯಬೇಕಾದರೆ ಕನ್ನಡ ಭಾಷೆ ಎಲ್ಲಾ ವಲಯಗಳಲ್ಲಿ ಬಳಕೆಯಾಗಬೇಕು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದರೆ ಕನ್ನಡ ಎಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದರು.

ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ.  ಕನ್ನಡ ಭಾಷೆಯಲ್ಲಿ ಮಹತ್ವದ ಸಾಹಿತ್ಯ ಕೃತಿಗಳನ್ನು ಕವಿಗಳು ರಚಿಸಿದ್ದಾರೆ. ವಿಶ್ವಮಾನ್ಯವಾದ ಸಾಹಿತ್ಯ ರಚನೆ ಕನ್ನಡದಲ್ಲಿ ಆಗಿದೆ. ಕನ್ನಡ ಪರಂಪರೆಯನ್ನು ಅಧ್ಯಯನ ಮಾಡಿದವರಿಗೆ ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆ ಅರಿವಾಗುತ್ತದೆ.  ಜಗತ್ತಿನ ಪ್ರಮುಖ ಭಾಷೆಗಳ ಸಾಲಿನಲ್ಲಿ ಕನ್ನಡಕ್ಕೆ ಮಹತ್ವದ ಸ್ಥಾನವಿದೆ. ಇಂತಹ ಕನ್ನಡ ಭಾಷೆಯನ್ನು ಬಳಸುತ್ತಾ, ಕನ್ನಡ ಪುಸ್ತಕಗಳನ್ನು ಓದುವ ಮೂಲಕ ಕನ್ನಡ ಉಳಿಸಬೇಕಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಹತ್ವದ ಪಾತ್ರವಹಿಸಿತ್ತು. ಕರ್ನಾಟಕ ಏಕೀಕರಣ ಚಳುವಳಿ ಕನ್ನಡ ಮಾತನಾಡುವವರನ್ನು  ಒಗ್ಗೂಡಿಸಿ ಮೈಸೂರು ರಾಜ್ಯವಾಗಿಸಿತು. ನಂತರ ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣಗೊಂಡಿತು.  ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಐವತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮವನ್ನು ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮಗಳು ನಡೆಯುತ್ತಿವೆ. ಕನ್ನಡವನ್ನು ಕಟ್ಟುವ ಕೆಲಸ ನಿರಂತರ ನಡೆಯಬೇಕಾಗಿದೆ. ಕನ್ನಡ ಭಾಷೆಯನ್ನು ಕರ್ನಾಟಕದಲ್ಲಿ ಶಿಕ್ಷಣ, ಆಡಳಿತ, ಸಾಂಸ್ಕೃತಿಕ ಸೇರಿದಂತೆ ಎಲ್ಲಾ ವಲಯಗಳಲ್ಲಿ ಉಳಿಸಬೇಕು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಹಿತಿಗಳು ಮತ್ತು ಕಲಾವಿದರ ಕೊಡುಗೆ ಅಪಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಆಯುಕ್ತ. ವೆಂಕಟರಾಜು, ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷೆ ಪದ್ಮಾವತಿ, ಸಂಗೀತ ಶಿಕ್ಷಕಿ ಮೀರಾಬಾಯಿ, ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿಯ ಸಂಗೀತ, ನೃತ್ಯ ಮತ್ತು ಯೋಗ ಕಲಿಕಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಯೋಗ ಪ್ರದರ್ಶನ ನಡೆಯಿತು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

5 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

10 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

13 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago