ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಯಾಶೀಲತೆ, ಪ್ರಶ್ನೆ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು. ಇದರ ಜೊತೆಗೆ ಆಧುನಿಕ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಅರಿವು ವೃದ್ಧಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರದ ಕನ್ನಡ ಜಾಗೃತ ಭವನದಲ್ಲಿ ಗುರುವಾರ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ, ನಗರದ ನೆಲದಾಂಜನೇಯಸ್ವಾಮಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಮೇಸ್ತ್ರಿಗಳ ಸಂಘ ಹಾಗೂ ಬೆಂಗಳೂರಿನ ಬ್ಲಾಸಮ್ ಆಸ್ಪತ್ರೆ ವತಿಯಿಂದ ನಡೆದ ಕಾರ್ಮಿಕರ ಉಚಿತ ಆರೋಗ್ಯ ತಪಾಸಣ ಶಿಬಿರ, ಲ್ಯಾಪ್ ಟಾಪ್ ವಿತರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶವನ್ನು ಕಟ್ಟುವ ಕೆಲಸದಲ್ಲಿ ಕಟ್ಟಡ ಕಾರ್ಮಿಕರ ಕೊಡುಗೆಯು ಮಹತ್ವದ್ದಾಗಿದೆ. ಕಟ್ಟಡ ನಿರ್ಮಾಣ ಕೆಲಸದಲ್ಲಿ ನೂತನ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುವ ಕುರಿತು ಕಾರ್ಮಿಕರು, ಮೇಸ್ತ್ರಿಗಳಿಗೆ ತರಬೇತಿಗಳನ್ನು ನೀಡುವ ಕಡೆಗೂ ಕಾರ್ಮಿಕ ಇಲಾಖೆ ಗಮನ ನೀಡಬೇಕಿದೆ ಎಂದರು.
ಕಾರ್ಮಿಕ ಇಲಖೆಯ ಜಿಲ್ಲಾ ಮಟ್ಟದ ಅಧಿಕಾರಿ ಎಚ್.ಆರ್.ನಾಗೇಂದ್ರ ಮಾತನಾಡಿ, ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪಿಯುಸಿ ಹಂತದಲ್ಲೇ ಲ್ಯಾಪ್ ಟಾಪ್ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಪದವಿ ಹಂತದ ಶಿಕ್ಷಣದವರೆಗೂ ಲ್ಯಾಪ್ಟಾಪ್ಗಳು ಉಪಯೋಗಕ್ಕೆ ಬರಲಿವೆ. ತಾಲ್ಲೂಕಿನ 40 ಜನ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ನೀಡಲಾಗುತ್ತಿದೆ ಎಂದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…