ಪ್ರತಿಯೊಬ್ಬ ವಿದ್ಯಾರ್ಥಿ ತಂತ್ರಜ್ಞಾನದ ಅರಿವು, ಕ್ರೀಯಾಶೀಲತೆ, ಪ್ರಶ್ನೆ ಮಾಡುವ ಮನೋಭಾವ ವೃದ್ಧಿಸಿಕೊಳ್ಳಬೇಕು-ಶಾಸಕ ಧೀರಜ್ ಮುನಿರಾಜ್‌

ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಯಾಶೀಲತೆ, ಪ್ರಶ್ನೆ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು. ಇದರ ಜೊತೆಗೆ ಆಧುನಿಕ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಅರಿವು ವೃದ್ಧಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್‌ ಹೇಳಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ಗುರುವಾರ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ, ನಗರದ ನೆಲದಾಂಜನೇಯಸ್ವಾಮಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಮೇಸ್ತ್ರಿಗಳ ಸಂಘ ಹಾಗೂ ಬೆಂಗಳೂರಿನ ಬ್ಲಾಸಮ್ ಆಸ್ಪತ್ರೆ ವತಿಯಿಂದ ನಡೆದ ಕಾರ್ಮಿಕರ ಉಚಿತ ಆರೋಗ್ಯ ತಪಾಸಣ ಶಿಬಿರ, ಲ್ಯಾಪ್ ಟಾಪ್ ವಿತರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ಶಿಕ್ಷಣ ಸಂಸ್ಥೆ, ಸರ್ಕಾರಿ ಕಚೇರಿ, ಖಾಸಗಿ ಉದ್ಯೋಗ ಸಂಸ್ಥೆಗಳು ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕಾಗದ ರಹಿತ ವ್ಯವಸ್ಥೆಯನ್ನ ಅಳವಡಿಸಿಕೊಳ್ಳಲಾಗುತ್ತಿದೆ. ಕಂಪ್ಯೂಟರ್ ಜ್ಞಾನವು ಶಿಕ್ಷಣದ ಒಂದು ಭಾಗವೇ ಆಗಿದೆ. ಕಾರ್ಮಿಕರ ಮಕ್ಕಳು ಕಂಪ್ಯೂಟರ್ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕಾರ್ಮಿಕ ಇಲಾಖೆ ನೀಡುತ್ತಿರುವ ಲ್ಯಾಪ್ ಟಾಪ್ ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ದೇಶವನ್ನು ಕಟ್ಟುವ ಕೆಲಸದಲ್ಲಿ ಕಟ್ಟಡ ಕಾರ್ಮಿಕರ ಕೊಡುಗೆಯು ಮಹತ್ವದ್ದಾಗಿದೆ. ಕಟ್ಟಡ ನಿರ್ಮಾಣ ಕೆಲಸದಲ್ಲಿ ನೂತನ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುವ ಕುರಿತು ಕಾರ್ಮಿಕರು, ಮೇಸ್ತ್ರಿಗಳಿಗೆ ತರಬೇತಿಗಳನ್ನು ನೀಡುವ ಕಡೆಗೂ ಕಾರ್ಮಿಕ ಇಲಾಖೆ ಗಮನ ನೀಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಸಂಸ್ಥಾಪಕ ಸಲಹೆಗಾರ ಪ್ರೊ.ಚಂದ್ರಪ್ಪ, ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ವತಿಯಿಂದ ಸೂಕ್ತ ರೀತಿಯಲ್ಲಿ ಕಟ್ಟಡ ಪರವಾನಗಿ ಸಮಯದಲ್ಲಿ ಸಂಗ್ರಹವಾಗುವ ಸೇಸ್ ನ್ನು ಕಾರ್ಮಿಕ ಇಲಾಖೆಗೆ ಜಮೆ ಮಾಡುತ್ತಿಲ್ಲ. ಇದರಿಂದಾಗಿ ಕಾರ್ಮಿಕ ಇಲಾಖೆಯ ನಿಧಿಗೆ ಹಣ ಸಂಗ್ರಹ ಕಡಿಮೆಯಾಗುತ್ತಿದೆ.ಇದರಿಂದ ಕಾರ್ಮಿಕ ಮಕ್ಕಳಿಗೆ ನೀಡಲಾಗಿತ್ತಿದ್ದ ವಿದ್ಯಾರ್ಥಿ ವೇತನ ಕಡಿಮೆಯಾಗಿದೆ. ಈ ಬಗ್ಗೆ ಶಾಸಕರು ಸರ್ಕಾರದ ಗಮನಕ್ಕೆ ತರುವ ಮೂಲಕ ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆರ್ಥಿಕ ನೆರವು ದೊರೆಯುವಂತೆ ಮಾಡಬೇಕು ಎಂದರು.

ಕಾರ್ಮಿಕ ಇಲಖೆಯ ಜಿಲ್ಲಾ ಮಟ್ಟದ ಅಧಿಕಾರಿ ಎಚ್.ಆರ್.ನಾಗೇಂದ್ರ ಮಾತನಾಡಿ, ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪಿಯುಸಿ ಹಂತದಲ್ಲೇ ಲ್ಯಾಪ್ ಟಾಪ್ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಪದವಿ ಹಂತದ ಶಿಕ್ಷಣದವರೆಗೂ ಲ್ಯಾಪ್ಟಾಪ್ಗಳು ಉಪಯೋಗಕ್ಕೆ ಬರಲಿವೆ. ತಾಲ್ಲೂಕಿನ 40 ಜನ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಅರವಿಂದ ಶಂಕರಗೌಡ ವಹಿಸಿದ್ದರು. ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎಸ್.ಸುಬ್ಬರಾವ್, ಕಾರ್ಮಿಕ ಇಲಾಖೆ ನಿರೀಕ್ಷಕ ದಯಾನಂದಸಾಗರ್, ಸಂಘದ ಕಾರ್ಯದರ್ಶಿ ಜಗದೀಶ್, ಸಂಘಟನ ಕಾರ್ಯದರ್ಶಿ ರುದ್ರಮೂರ್ತಿ, ಖಜಾಂಚಿ ಸಿ.ಸತೀಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ನಗರಸಭೆ ಸದಸ್ಯರಾದ ಭಾಸ್ಕರ್, ಬಂತಿವೆಂಕಟೇಶ್ ವತ್ಸಲಾ, ಹಂಸಪ್ರಿಯಾ, ಪದ್ಮನಾಭ್, ಲಕ್ಷ್ಮೀಪತಿ, ನಾಗರತ್ನ, ರಾಜಣ್ಣ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

3 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

5 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

7 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

7 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

9 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

14 hours ago