ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವದಿಂದ ಕಾಣಿ- ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್

ಸಮಾಜದಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಹಾಗೂ ಜ್ಞಾನ ಇರುತ್ತದೆ, ಅದನ್ನು ಗುರುತಿಸಿ ಬೆಳೆಸುವ ಜತೆಗೆ ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವ-ಪ್ರೀತಿಯಿಂದ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಭೋಲಾ ಪಂಡಿತ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲ‌ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ‌ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರವೂ ವಿಶೇಷಚೇತನರಿಗಾಗಿ ಹಲವಾರು ಯೋಜನೆ-ಕಾನೂನುಗಳನ್ನು ಜಾರಿಗೆ ತಂದಿದೆ. 2016ರ ಕಾಯ್ದೆಯಡಿ ಉಚಿತವಾಗಿ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ವ್ಯಾಸಂಗದಲ್ಲಿ ಶೇ. 5 ರಷ್ಟು ಮೀಸಲಾತಿ ಜತೆಗೆ ಸರ್ಕಾರಿ ನೌಕರಿಯಲ್ಲೂ ಮೀಸಲಾತಿ ಕಲ್ಪಿಸಿದೆ ಎಂದರು.

ಪ್ರತಿ ಜಿಲ್ಲೆಯಲ್ಲೂ ಕಾನೂನು ಸೇವಾ ಪ್ರಾಧಿಕಾರ ಸ್ಥಾಪಿಸಿದ್ದು, ವಿಶೇಷಚೇತನರಿಗೆ ಉಚಿತವಾಗಿ ಕಾನೂನು ಸಲಹೆ ಹಾಗೂ ನೆರವು ಒದಗಿಸುತ್ತಿದೆ. ಸರ್ಕಾರಿ ಸೌಲಭ್ಯಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿ ಕೊರತೆ ಇದೆ, ಅವರಿಗೆ ಸಂಪೂರ್ಣ ಮಾಹಿತಿ ತಿಳಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕಕರು ಶ್ರಮಿಸಬೇಕು. ವಿಶೇಷಚೇತನರು ಅಂಗವೈಕಲ್ಯವನ್ನು ಮೆಟ್ಟಿ ನಿಂತು ತಮ್ಮಲ್ಲಿರುವ ವಿಶೇಷ ಸಾಮರ್ಥ್ಯವನ್ನು ಮತ್ತು ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಸಾಧಕರಾಗಬೇಕು ಎಂದು ಕರೆ ನೀಡಿದರು.

ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್ ಅವರು ಮಾತನಾಡಿ, ವಿಕಲಚೇತನರನ್ನು ಸಮಾಜದ ಮುನ್ನೆಲೆಗೆ ತರುವ ಉದ್ದೇಶದಿಂದ ವಿಕಲಚೇತನರ ದಿನಾಚರಣೆ ಆರಂಭಿಸಲಾಯಿತು. ಸಮಾಜದಲ್ಲಿ ಜನಸಂಖ್ಯೆಯ ಶೇ. 16 ರಷ್ಟು ವಿಶೇಷಚೇತನರು ಇದ್ದು, ಅವರ ಸಂರಕ್ಷಣೆಗೆ ಸರ್ಕಾರದ ಅನೇಕ ಯೋಜನೆಗಳು ಹಾಗೂ ಕಾನೂನುಗಳು ಜಾರಿಯಲ್ಲಿವೆ. ವಿಶೇಷಚೇತನರು ಯಾವುದಕ್ಕೂ ಕಡಿಮೆ ಇಲ್ಲ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆ/ವ್ಯಕ್ತಿಗಳನ್ನು ಸನ್ಮಾನಿಸುವ ಮೂಲಕ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲೆಯ ವಿಶೇಷಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಲಕ್ಷ್ಮಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ ಎಂ, ಯುವಜನ ಸಹಾಯಕರಾದ ಸತೀಶ್, ದೇವನಹಳ್ಳಿ ಸಿಡಿಪಿಒ ಸುನೀತಾ ಸೇರಿದಂತೆ ಜಿಲ್ಲೆಯ ಎಲ್ಲಾ ವಿಕಲಚೇತನರು ಪ್ರಗತಿಪರ ಸಂಘಟನೆಗಳು, ಎಲ್ಲಾ ವಿವಿಧೋದ್ದೇಶ/ನಗರ/ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಮಟ್ಟದ ವಿಕಲಚೇತನರ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

6 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago