ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ- ವೈದ್ಯೆ ಡಾ.ಕೆ.ಎಂ.ವೇದಾಮಣಿ

ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಮತ್ತು ಜೀವನದಲ್ಲಿ ಯಶಸ್ಸಿಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವೈದ್ಯೆ ಡಾ. ಕೆ.ಎಂ.ವೇದಾಮಣಿ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಸಹ್ಯಾದ್ರಿ ಮತ್ತು ಜ್ಞಾನಗಂಗಾ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣದ ಮಹತ್ವವನ್ನು ಅರಿತವರು ವಿದ್ಯಾರ್ಥಿಗಳಿಗೆ ಶಿಸ್ತು ಸಕಾರಾತ್ಮಕ ಬೆಳವಣಿಗೆ ಸಹಕಾರಿ ಆಗುತ್ತದೆ. ಮಕ್ಕಳನ್ನು  ಸುಶಿಕ್ಷಿತಗೊಳಿಸುವಲ್ಲಿ ಪೋಷಕರ ಪಾತ್ರ ಮಹತ್ವದಾಗಿರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ವಿನಯವು ಬಹುಮುಖ್ಯವಾಗಿರುತ್ತದೆ. ಮಾನವೀಯ ಮೌಲ್ಯಗಳೊಂದಿಗೆ ಆರೋಗ್ಯಕರ ಜೀವನ ಶೈಲಿಯಿಂದ  ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಕನ್ನಡ ಭಾಷಾ ವಿಷಯ ಪರೀಕ್ಷಕರಾದ ಪದ್ಮಾವತಿ ಮಾತನಾಡಿ, ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಉತ್ತಮಗೊಳಿಸಲು 20 ಅಂಶಗಳ ಕಾರ್ಯಕ್ರಮವನ್ನು ರೂಪಿಸಿದೆ. ಉತ್ತಮ ಫಲಿತಾಂಶ ಮತ್ತು ಗುಣಮಟ್ಟದ ಶಿಕ್ಷಣ ಶಿಕ್ಷಕರ ಗುರಿಯಾಗಿದೆ.‌ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯ ಭಾಗವಹಿಸಬೇಕು. ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ಪ್ರತಿಭೆಯು  ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪತ್ರಕರ್ತ ಡಿ.ಶ್ರೀಕಾಂತ್, ನಿವೃತ್ತ ಮುಖ್ಯಶಿಕ್ಷಕ ಹನುಮೇಗೌಡ, ಜ್ಞಾನಗಂಗಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆರ್.ವಿಜಯಕುಮಾರ್ ಮತ್ತು ವಿದ್ಯಾಸಂಸ್ಥೆಯ ಪದಾಧಿಕಾರಿಗಳು, ಮುಖ್ಯಶಿಕ್ಷಕರುಗಳಾದ ರವಿಕುಮಾರ್, ಜಗದೀಶ್ ಮತ್ತು ಶಿಕ್ಷಕರು, ಪ್ರತಿಭಾ ಪುರಸ್ಕೃತ ವಿದ್ಯಾರ್ಥಿಗಳಾದ ಎನ್.ಅಭಿಷೇಕ್, ಎಚ್.ಎಸ್.ಅಮೂಲ್ಯ, ಟಿ.ಎಚ್.ಸೃಜನ್ ಮುಂತಾದವರು ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Leave a Reply

Your email address will not be published. Required fields are marked *

error: Content is protected !!