ಎಲ್ಲಾ ವೃತ್ತಿಗಳಲ್ಲಿ ನಿವೃತ್ತಿ ಹೊಂದಿದ ಮೇಲೆ ಮಾಜಿ ಅನ್ನೋ ಪದ ಇರುತ್ತದೆ. ಆದರೆ ಶಿಕ್ಷಕ ವೃತ್ತಿಯಲ್ಲಿ ಮಾಜಿ ಅನ್ನೋ ಪದ ಇರೋದಿಲ್ಲ. ಶಿಕ್ಷಕರು ಸದಾ ಕಲಿಯುತ್ತಿರುತ್ತಾರೆ ಕಲಿತ್ತದ್ದನ್ನ ಇನ್ನೊಬ್ಬರಿಗೆ ಕಲಿಸುವ ಹಂಬಲ ಶಿಕ್ಷಕರಿಗೆ ಮಾತ್ರ ಇರುತ್ತದೆ ಎಂದು ಉಪನ್ಯಾಸ ಸುಧಾಕರ್ ಹೇಳಿದರು.
ತಾಲೂಕಿನ ಗುಂಜೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ. ಪ್ರಾಥಮಿಕ ಶಿಕ್ಷಣವು ಎಲ್ಲರಿಗೂ ತಳಹದಿ. ವಿದ್ಯಾದಾನ ಮಾಡುವವರನ್ನ ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.
ನಂತರ ಶಿಕ್ಷಕ ಚಂದ್ರಶೇಖರಯ್ಯ ಮಾತನಾಡಿ, ಪಾಠ ಹೇಳಿಕೊಟ್ಟ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಂಡು ಗೌರವ ನೀಡುತ್ತಿರುವುದು ಬಹಳ ಸಂತೋಷದ ಸಂಗತಿ. ಒಬ್ಬ ಶಿಕ್ಷಕನಿಗೆ ಯಾವಾಗ ಸಂತೋಷ ಆಗುತ್ತೆಂದರೆ ತನ್ನ ವಿದ್ಯಾರ್ಥಿ ದೇಶದ ಉತ್ತಮ ಪ್ರಜೆಯಾದಾಗ, ಅಸಹಾಯಕರಿಗೆ ಸಹಾಯ ಮಾಡಿದಾಗ ಎಂದರು.
ಈ ಹಿಂದೆ ಖಾಸಗಿ ಶಾಲೆಗಳ ಹಾವಳಿ ಕಡಿಮೆ ಇತ್ತು. ಈಗ ಖಾಸಗಿ ಶಾಲೆಗಳು ಹೆಚ್ಚಾಗಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಶೂ, ಪಠ್ಯಪುಸ್ತಕ, ಬ್ಯಾಗ್, ಸಮವಸ್ತ್ರ, ಬಿಸಿ ಊಟ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲವೂ ಉಚಿತವಾಗಿ ನೀಡುತ್ತಿದೆ. ನುರಿತ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಲಾಗಿದೆ. ಆದರೆ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಿದ್ದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುತ್ತಿಲ್ಲ ಎಂದರು.
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…
ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…
ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…