ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ (ಫೆ.16) ಮಧ್ಯಾಹ್ನ ಸುಮಾರು 3ಗಂಟೆಯಲ್ಲಿ ನಡೆದಿದೆ… ತಡವಾಗಿ ಇಂದು ಬೆಳಕಿಗೆ ಬಂದಿದೆ…
ನಯನಾ (20) ಸುಮಾರು 12ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ..
ಮೃತ ನಯನಾ ಸರ್ಜಾಪುರ ಮೂಲದರಾಗಿದ್ದು, ಗೀತಾ ವಿವಿಯಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ನಿಜಾಂಶ ಹೊರಬೀಳಲಿದೆ..
ಗೀತಂ ವಿವಿಯಲ್ಲಿ ಪದೇ ಪದೇ ವಿದ್ಯಾರ್ಥಿಗಳ ಸಾವಿನ ಪ್ರಕರಣ ವರದಿಯಾಗುತ್ತಿದೆ. ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ. ಆತ್ಮಹತ್ಯೆ ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…