ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ‌.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 15 ರಿಂದ ಆರಂಭವಾಗಲಿದ್ದು www.sw.kar.nic.in ವೈಬ್ಸೈಟ್ ಮೂಲಕ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ.

ಪರಿಶಿಷ್ಟ ಜಾತಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787447, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ: 080- 27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

5 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

10 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

13 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

24 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago