ಪ್ರತಿಷ್ಠಿತ ಶಾಲೆಗಳ 6ನೇ ತರಗತಿಗೆ ಸೇರಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 06ನೇ ತರಗತಿ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಅರ್ಜಿ ನಮೂನೆ ಮತ್ತು ವಿವರಗಳನ್ನು ಉಪ ನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದ್ದು, www.sw.kar.nic.in ಆನ್ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ. 03 ರಂದು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787447, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080- 27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ.

ವಿಶೇಷ ಸೂಚನೆ:

ಪ್ರವೇಶ ಪರೀಕ್ಷೆಯನ್ನು ದಿನಾಂಕ: 09.05.2025 ರಂದು ಶುಕ್ರವಾರ ಬೆಳಗ್ಗೆ 10.30 ರಿಂದ 01:30 ಗಂಟೆಯವರೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸ ಬಸ್ ನಿಲ್ದಾಣದ ಎದುರು, ದೇವನಹಳ್ಳಿ ಟೌನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *