ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾನ ದಿನದಿಂದು ಮತದಾರರ ಯೋಗಕ್ಷೇಮ, ಮತದಾನದ ಕೇಂದ್ರದಲ್ಲಿ ಮತದಾರರ ಮಾಹಿತಿ, ವ್ಯವಸ್ಥೆಗಳು, ಸಮಸ್ಯೆಗಳಿಗೆ ಸ್ಪಂದಿಸಲು ಮಾಹಿತಿ ನೀಡುವ ಸಲುವಾಗಿ ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮತದಾರ ಮಿತ್ರ ಬಳಸುವ ಟೀ ಶರ್ಟ್ ಹಾಗೂ ಕ್ಯಾಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮತದಾರ ಮಿತ್ರರನ್ನು ಮತದಾರರು ಗುರುತಿಸಲು ಮತದಾರ ಮಿತ್ರ ಎಂಬ ಬರಹವಿರುವ ಟೀ ಶರ್ಟ್ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಈ ಮತದಾರ ಮಿತ್ರ ಕರ್ತವ್ಯ ನಿರ್ವಹಣೆ ಮಾಡಲಿದ್ದಾರೆ.
ಮತದಾರರಿಗೆ ಯಾವುದೇ ಸಹಾಯ ಅಂದರೆ ಮತದಾರ ಪಟ್ಟಿಯಲ್ಲಿ ಹೆಸರು ಹುಡುಕುವುದು, ವಿಕಲಚೇತನ, ಹಿರಿಯರಿಗೆ ವೀಲ್ ಚೇರ್ ವ್ಯವಸ್ಥೆ ಮಾಡುವುದು,
ಕುಡಿಯುವ ನೀರು ಒದಗಿಸುವುದು, ಶೌಚಾಲಯಕ್ಕೆ ದಾರಿ ತೋರಿಸುವುದು, ಮತದಾನ ವೇಳೆ ಮತದಾರನಿಗೆ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಪ್ರತಿ ಬೂತ್ ನಲ್ಲಿ ಮತದಾರ ಮಿತ್ರನನ್ನು ನೇಮಿಸಲಾಗಿದೆ ಎಂದರು.
ಈ ವೇಳೆ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ್ ಮೋಹನ ಕುಮಾರಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಮತದಾರ ಮಿತ್ರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…