ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು- ಸಿಎಂ ಸಿದ್ದರಾಮಯ್ಯ

ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಖೋಡೆ ವೃತ್ತದಲ್ಲಿ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಕುತಂತ್ರದಿಂದ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದು ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.

ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.

ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು ಎಂದರು.

ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ಹೇಳಿದರು.

ಆದಿಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

6 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

17 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

22 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 day ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago