Categories: Accident

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು ಕುಮಟಾದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಓರ್ವ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿತ್ರದುರ್ಗದ ಹೆಗ್ಗೆರೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತದ ತೀವ್ರತೆಗೆ ಕಾರ್‌ ಟಾಪ್ ಕಿತ್ತಿದ್ದು, ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಮೃತ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌, ಗಾಯಾಳುಗಳು ಎಸ್‌ಐ ಎಂದು ತಿಳಿದು ಬಂದಿದೆ. ಐವರು ಒಂದೇ ಕಾರ್‌ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು-ಟಿಪ್ಪರ್ ನಡುವೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ವೀರನಪುರ ಕಾಲೋನಿಯ ನಿವಾಸಿ ಪ್ರವೀಣ್(24) ಸಾವನ್ನಪ್ಪಿದ್ದಾನೆ. ಗುಂಡ್ಲುಪೇಟೆ ತಾಲೋಕು ಮಾದಾಪಟ್ಟಣದ ಬಳಿ ಅಪಘಾತ ನಡೆದಿದೆ.

ಮತ್ತೊಂದು ಘಟನೆಯಲ್ಲಿ ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದ ಬಳಿ ಅಪಘಾತ ಸಂಭವಿಸಿದೆ. ಅಪಘಾತ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೈಕ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹೋದರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬರ್ಗಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಾದ ಗುರು ಹಾಗೂ ವಿಠಲ ಹರಿಕಾಂತ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳು ಬೆಟ್ಕುಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದ್ದು, ಬೈಕ್ ಸವಾರರು ಕಿಮಾನಿ ಕಡೆಯಿಂದ ಬೈಕ್‌ನಲ್ಲಿ ಬಂದು ಕುಮಟಾ ಕಡೆಗೆ ಹೋಗಲು ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ವೇಳೆ, ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ಚಲಿಸುತ್ತಿದ್ದ ತೆಲಂಗಾಣ ನೋಂದಣಿ ಹೊಂದಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 hour ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

11 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

24 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago