ಕೋಲಾರ: ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಬೆಲೆ ಬಾಳುವ ವಸ್ತುಗಳನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಾರಸುದಾರರಿಗೆ ಹಿಂದುರಿಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದರು..
ನಗರದಲ್ಲಿರುವ ಎಸ್ಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಕಳ್ಳತನ ಪ್ರಕರಣಗಳ ಕಳ್ಳರ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚನೆ ಮಾಡಲಾಗಿತ್ತು, ದೂರಿನ ಅನ್ವಯ ತನಿಖೆ ಕೈಗೊಂಡಿದ್ದ ಅಧಿಕಾರಿಗಳು ಬೇರೆ ರಾಜ್ಯಗಳಿಗೆ ತೆರಳಿ ಆರೋಪಿಗಳನ್ನು ಬಂಧಿಸಿ ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ರಾಜಸ್ಥಾನ ನಿವಾಸಿ ಅಜತ್ ಕುಮಾರ್, ಜಮ್ಮು ರಾಜ್ಯದ ಮಹಮದ್ ರಂಜಾನ್, ಮಧ್ಯ ಪ್ರದೇಶದ ಪ್ರವೀಣ್ ಸ್ವಾನಾಡಿಯಾ ಸ್ಥಳೀಯರ ಸಹಾಯವಿಲ್ಲದೆ ನಗದು ಕಳವು ಮಾಡಿದ್ದರು. ಅವರು ಸ್ವಂತ ಸ್ಥಳಗಳಿಗೆ ತೆರಳಿ ತಲೆಮರಿಸಿಕೊಂಡಿದ್ದರು. ಅವರನ್ನು ಪತ್ತೆ ಹಚ್ಚಲು ತೆರಳಿದ್ದ ಸಮಯದಲ್ಲಿ ಪೊಲೀಸರ ಮೇಲೆ ಕಳ್ಳರು ಹಲ್ಲೆ ನಡೆಸಲು ಯತ್ನಿಸಿದ್ದರು. ಅಪರಾಧಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.
ಕೆಜಿಎಫ್ ನಗರದ ಸುಮತಿ ನಗರ ನಿವಾಸಿ ಪ್ರದೀಪ್ ಫ್ಲಿಪ್ ಕಾರ್ಟ್ ಕಂಪನಿಯಲ್ಲಿ ಮೇಲಾಧಿಕಾರಿಗಳ ಕಣ್ಣು ತಪ್ಪಿಸಿ 14 ಆಪಲ್ ಫೋನ್ ಹಾಗೂ 15 ಸಾವಿರ ನಗದನ್ನು 2024ರ ಜ.17ರಂದು ದೋಚಿ ಏನು ಗೊತ್ತಿಲ್ಲದ ಹಾಗೆ ಇದ್ದ. ಈ ಕುರಿತು ಪ್ರಕರಣ ದಾಖಲಾಗಿ ಅಪರಾಧಿ ಪ್ರದೀಪ್‌ನನ್ನು ವಿಚಾರಣೆ ಮಾಡಿದಾಗ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಪರಾಧಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಿ ವಾರಸುದಾರರಿಗೆ ಮಾಲನ್ನು ಒಪ್ಪಿಸಲಾಯಿತು ಎಂದರು.
ಜ.19ರಂದು ತಾಲೂಕಿನ ನಾಯಕರಹಳ್ಳಿ ಗ್ರಾಮದ ಶ್ರೀವೇಣುಗೋಪಾಲಸ್ವಾಮಿ ದೇವಾಲಯದ ಬಾಗಿಲನ್ನು ಮುರಿದು ದೇವರ ಅಲಂಕಾರದ ಬೆಳ್ಳಿಯ ಮೂರು ಕಿರೀಟಗಳು ಹಾಗೂ 2 ಚಿನ್ನದ ತಾಳಿ ಬೊಟ್ಟುಗಳನ್ನು ಕಳವು ಮಾಡಿದ್ದ ಆರೋಪಿಗಳಾದ ಹರಳಕುಂಟೆ ನಿವಾಸಿ ಸೈಯದ್ ನಯಾಜ್, ವಶಪಡಿಸಿಕೊಂಡು ದೇವಾಲಯಕ್ಕೆ ಹಿಂದುರುಗಿಸಲಾಗಿದೆ ಎಂದು ಮಾಹಿತಿ ನೀಡಿದ ಎಸ್ಪಿ ಎಂ.ನಾರಾಯಣ ಅವರು, ಪ್ರಕರಣಗಳ ಅಪರಾಧಿಗಳನ್ನು ಪತ್ತೆ ಹಚ್ಚಲು ಶ್ರಮಿಸಿರುವ ತನಿಖಾ ತಂಡಕ್ಕೆ ತಲಾ 5 ಸಾವಿರ ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…