ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಪ್ರಥಮ ಪಿಯುಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವಸತಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳು ಖಾಲಿ ಇದ್ದು, ಯಾವುದೇ ವಸತಿ ಶಾಲೆ/ಸರ್ಕಾರಿ/ಅನುದಾನಿತ/ಅನುದಾನ ರಹಿತ/ಇತರೆ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್. ಲೇಖನ ಸಾಮಗ್ರಿ, ಕ್ರೀಡಾ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.
ಅರ್ಜಿ ಸಲ್ಲಿಸುವರು ವಸತಿ ಶಾಲೆಯ ಅಧಿಕಾರಿ/ಸಿಬ್ಬಂದಿರವರನ್ನು ಸಂಪರ್ಕಿಸಿ ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಮತ್ತು ಪ್ರಥಮ ಪಿ.ಯು.ಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗಳಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿ ಪಡೆದು. ಜಿಲ್ಲಾ ಕಛೇರಿ/ವಸತಿ ಶಾಲೆಗೆ ಅರ್ಜಿ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ,ದೂ.ಸಂ- 9900945262. 9742651522. 8073617143. 9986417499. 9742998287. ಪ್ರಾಂಶುಪಾಲರು, ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂ.ಸಂ- 9632933397, 8660971267 ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದು ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ- 080-27682882, 27627444, 27931899, 27725445, 8317403213 ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…