ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2026-27ನೇ ಸಾಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಟಿ ಹಾಗೂ ಪಿ.ಸಿ.ಎಂ.ಸಿ ಕೋರ್ಸ್‌ಗಳ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ. 75% ರಷ್ಟು ಇತರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ. 25% ರಷ್ಟು ಸ್ಥಾನಗಳನ್ನು ವರ್ಗವಾರು ಮೀಸಲಿರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು 2 ಮೇ. 2026 ರ ಮೇ. 2 ರಂದು ಕೊನೆಯ ದಿನವಾಗಿದೆ.
ಜಿಲ್ಲೆಯ ಈ ಕೆಳಕಂಡ ವಸತಿ ಕಾಲೇಜುಗಳಲ್ಲಿ ಅರ್ಜಿಯನ್ನು ವಿತರಿಸಲಾಗುವುದು.
1. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಜಡಿಗೇನಹಳ್ಳಿ, ಹೊಸಕೋಟೆ ತಾಲ್ಲೂಕು.
2. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಬಚ್ಚಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು.
3. ಅಟಲ್ ಬಿಹಾರಿ ವಾಜಪೇಯಿ ವಿಜ್ಞಾನ ಪದವಿ ಪೂರ್ವ ಕಾಲೇಜು ಬೊಮ್ಮಾವಾರ, ದೇವನಹಳ್ಳಿ ತಾಲ್ಲೂಕು.
4. ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ದೊಡ್ಡೇರಿ (ಸೋಂಪುರ), ನೆಲಮಂಗಲ ತಾಲ್ಲೂಕು ಹಾಗೂ ಆನ್ ಲೈನ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆನ್ ಲೈನ್ ಮೂಲಕ ಸಲ್ಲಿಸುವ https://kreisportal.karnataka.gov.in/ipuappin/forms/online1
ಹೆಚ್ಚಿನ ಮಾಹಿತಿಗಾಗಿ ಶ್ರೀಮತಿ ಶ್ರೀ ಕಿರಣ್ ಕುಮಾರ್ ಎನ್. ಪ್ರಾಂಶುಪಾಲರು- 9110256424, ಶ್ರೀಮತಿ ನಾಗರತ್ನ ಪ್ರಾಂಶುಪಾಲರು- 8105526933, ಗಿರೀಶ್ ಎ.ಓ ಪ್ರಾಂಶುಪಾಲರು- 8660152639, ಶ್ರೀಮತಿ ಲೀಲಾ ಪ್ರಾಂಶುಪಾಲರು- 6495812105 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ ಟಿ.ಎಲ್.ಎಸ್ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…