ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ (AB- PMJAY-CMARK) ರಾಜ್ಯದ ಪರಿಷ್ಕೃತ “ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ABPMJAY-CMArk ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಲ್ಲಿ ಬಿ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರೂ.05 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವಿರುತ್ತದೆ. ಹಾಗೂ ಎ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ 30% ರಷ್ಟು ಚಿಕಿತ್ಸಾ ವೆಚ್ಚ ಸರ್ಕಾರದಿಂದ ಪಾವತಿ-ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50 ಲಕ್ಷಗಳವರೆಗೆ ಪ್ರಯೋಜನೆ ಪಡೆಯಬಹುದಾಗಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 101 ಗ್ರಾಮ ಪಂಚಾಯತಿಗಳಲ್ಲಿ ಮತ್ತು ವಿವಿಧ ಇಲಾಖೆಗಳಾದ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ನಗರ ಸಭೆ/ಪುರಸಭೆ/ಪಟ್ಟಣ ಸಭೆ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಅಂಗವಿಕಲರ ಇಲಾಖೆ, ಆಹಾರ ಮತ್ತು ಸರಬರಾಜು ಇಲಾಖೆ, ಕೈಗಾರಿಕೆ ಇಲಾಖೆ, ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳ ಸಹಕಾರದೊಂದಿಗೆ AB- PMJAY-CMARK ಕಾರ್ಡ್ ನ್ನು ಪಡೆಯಲು ಎಲ್ಲಾ ಎಪಿಎಲ್/ಬಿಪಿಎಲ್ ಫಲಾನುಭವಿಗಳು ತಮ್ಮ ಆಧಾರ್‌ಕಾರ್ಡ್, ರೇಷನ್ ಕಾರ್ಡ್ (ಪಡಿತರಚೀಟಿ), ಆಧಾರ್ ನೋಂದಾಯಿತ ಮೊಬೈಲ್‌ನೊಂದಿಗೆ ಗುರುತಿನ ಚೀಟಿಗಳನ್ನು Ayushman App/BIS 2.0 self registration app 2.0 Android Mobile Playstore/Google ನಲ್ಲಿ ಸ್ವ- ನೋಂದಣಿ ಮಾಡಿಕೊಳ್ಳುವ ಮೂಲಕ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ (AB-PMAY- CMARK) ಕಾರ್ಡುಗಳನ್ನು ಪಡೆಯಬಹುದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…