ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ ಕಾರ್ಡ್ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ (AB- PMJAY-CMARK) ರಾಜ್ಯದ ಪರಿಷ್ಕೃತ “ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ABPMJAY-CMArk ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಲ್ಲಿ ಬಿ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರೂ.05 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವಿರುತ್ತದೆ. ಹಾಗೂ ಎ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ 30% ರಷ್ಟು ಚಿಕಿತ್ಸಾ ವೆಚ್ಚ ಸರ್ಕಾರದಿಂದ ಪಾವತಿ-ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50 ಲಕ್ಷಗಳವರೆಗೆ ಪ್ರಯೋಜನೆ ಪಡೆಯಬಹುದಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 101 ಗ್ರಾಮ ಪಂಚಾಯತಿಗಳಲ್ಲಿ ಮತ್ತು ವಿವಿಧ ಇಲಾಖೆಗಳಾದ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ನಗರ ಸಭೆ/ಪುರಸಭೆ/ಪಟ್ಟಣ ಸಭೆ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಅಂಗವಿಕಲರ ಇಲಾಖೆ, ಆಹಾರ ಮತ್ತು ಸರಬರಾಜು ಇಲಾಖೆ, ಕೈಗಾರಿಕೆ ಇಲಾಖೆ, ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳ ಸಹಕಾರದೊಂದಿಗೆ AB- PMJAY-CMARK ಕಾರ್ಡ್‌ ನ್ನು ಪಡೆಯಲು ಎಲ್ಲಾ ಎಪಿಎಲ್/ಬಿಪಿಎಲ್ ಫಲಾನುಭವಿಗಳು ತಮ್ಮ ಆಧಾರ್‌ಕಾರ್ಡ್, ರೇಷನ್‌ ಕಾರ್ಡ್ (ಪಡಿತರಚೀಟಿ), ಆಧಾರ್ ನೋಂದಾಯಿತ ಮೊಬೈಲ್‌ನೊಂದಿಗೆ ಗುರುತಿನ ಚೀಟಿಗಳನ್ನು Ayushman App/BIS 2.0 self registration app 2.0 Android Mobile Playstore/Google ನಲ್ಲಿ ಸ್ವ- ನೋಂದಣಿ ಮಾಡಿಕೊಳ್ಳುವ ಮೂಲಕ  ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ (AB-PMAY- CMARK) ಕಾರ್ಡುಗಳನ್ನು ಪಡೆಯಬಹುದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

3 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

14 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

15 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

15 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

15 hours ago

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

17 hours ago