ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಗಗನಯಾತ್ರಿ ಶುಭಾಂಶು ಶುಕ್ಲಾ

ಆಕ್ಸಿಯಮ್‌-4 ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದ ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರು, ಇಂದು (ಆ.18-ಸೋಮವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ‌.

ಈ ವೇಳೆ ಭಾರತೀಯ ಗಗನಯಾತ್ರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಪ್ಪುಗೆಯ ಸ್ವಾಗತ ಕೋರಿದ್ದಾರೆ.

ಪ್ರಧಾನಿ ಅಧಿಕೃತ ಕಚೇರಿಗೆ ಭೇಟಿ ನೀಡಿದ ಶುಭಾಂಶು ಶುಕ್ಲಾ ಅವರನ್ನು, ನರೇಂದ್ರ ಮೋದಿ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಶುಕ್ಲಾ ಅವರನ್ನು, “ಭಾರತದ ಬಾಹ್ಯಾಕಾಶ ಯೋಜನೆಯ ಪ್ರತಿನಿಧಿ” ಎಂದು ಪ್ರಧಾನಿ ಮೋದಿ ಕೊಂಡಾಡಿದ್ದಾರೆ.

ಶುಭಾಂಶು ಶುಕ್ಲಾ ಅವರಿಂದ ಆಕ್ಸಿಯಮ್-4 ಬಾಹ್ಯಾಕಾಶ ಕಾರ್ಯಾಚರಣೆಯ ವಿವರ ಪಡೆದುಕೊಂಡ ಪ್ರಧಾನಿ ಮೋದಿ, ಭಾರತೀಯ ಗಗನಯಾತ್ರಿಯ ಬಾಹ್ಯಾಕಾಶ ಯಾತ್ರೆಯ ಅನುಭವಗಳನ್ನು ಕೇಳಿ ರೋಮಾಂಚನಗೊಂಡಿದ್ದಾರೆ.

ಇದೇ ವೇಳೆ ಶುಭಾಂಶು ಶುಕ್ಲಾ ಅವರು ಪ್ರಧಾನಿ ಮೋದಿ ಅವರಿಗೆ, ಆಕ್ಸಿಯಮ್ -4 ಮಿಷನ್ ಪ್ಯಾಚ್‌ವೊಂದನ್ನು ಉಡುಗೊರೆಯಾಗಿ ನೀಡಿದರು. ಪ್ರಧಾನಿ ಮೋದಿ ಈ ಉಡುಗೊರೆಯನ್ನು ಅತ್ಯಂತ ಸಂತಸದಿಂದ ಸ್ವೀಕರಿಸಿದ್ದಾರೆ.

ತಮ್ಮ ಭೇಟಿಯ ಸಂದರ್ಭದಲ್ಲಿಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ಐಎಸ್‌ಎಸ್‌)ದಿಂದ ಕ್ಲಿಕ್ಕಿಸಿದ ಭೂಮಿಯ ಚಿತ್ರಗಳನ್ನು ಪ್ರಧಾನಿ ಮೋದಿ ಅವರಿಗೆ ತೋರಿಸಿದರು. ಶುಭಾಂಶು ಶುಕ್ಲಾ ಐಎಸ್‌ಎಸ್‌ಗೆ ಭೇಟಿ ನೀಡಿದ ಮೊದಲ ಮತ್ತು ಬಾಹ್ಯಾಕಾಶ ತಲುಪಿದ ಎರಡನೇ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶುಭಾಂಶು ಶುಕ್ಲಾ ಅವರೊಂದಿಗೆ ಉತ್ತಮ ಸಂವಾದ ನಡೆಯಿತು. ಬಾಹ್ಯಾಕಾಶದಲ್ಲಿ ಅವರ ಅನುಭವಗಳು, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿ ಹಾಗೂ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್ ಸೇರಿದಂತೆ ವಿವಿಧ ವಿಷಯಗಳ ಕುರಿತು ನಾವು ಚರ್ಚಿಸಿದ್ದೇವೆ. ಅವರ ಸಾಧನೆಯ ಬಗ್ಗೆ ಭಾರತ ಹೆಮ್ಮೆಪಡುತ್ತದೆ.

Ramesh Babu

Journalist

Recent Posts

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

18 minutes ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

1 hour ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

11 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

15 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

23 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

1 day ago