ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ- ಸಿಎಂ ಸಿದ್ದರಾಮಯ್ಯ

ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿರುವ ಕೇಂದ್ರ ಕೇಂದ್ರ ಬಿಜೆಪಿ (BJP) ಸರ್ಕಾರದ ಕ್ರಮ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಾಳಿಗಳನ್ನು ನಮ್ಮ ಸರ್ಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈಗಿರುವ ನಿಯಮಾವಳಿಗಳ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಕೂಡಾ ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ಮೇಲಿನ ನೇರ ಸವಾರಿಯಾಗಿದೆ ಎಂದರು.

ರಾಜ್ಯದ ವಿಶ‍್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿದೆ. ಇಲ್ಲಿಯ ವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ ಎಂದು ತಿಳಿಸಿದರು.

ಉಪಕುಲಪತಿಗಳ ನೇಮಕಾತಿಯ ಅರ್ಹತೆಗೆ ಸಂಬಂಧಿಸಿದಂತೆಯೂ ಕೆಲವು ಪ್ರಮುಖ ಬದಲಾವಣಿಗಳನ್ನು ಮಾಡಲಾಗಿದೆ. ಹೊಸ ನಿಯಮಗಳ ಪ್ರಕಾರ ಉಪಕುಲಪತಿಗಳನ್ನು ಕೇವಲ ಅಕಾಡೆಮಿಕ್ ವಲಯದಿಂದ ಮಾತ್ರ ನೇಮಿಸಿಕೊಳ್ಳದೆ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರನ್ನು ನೇಮಕಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಬಗೆಯುವ ದ್ರೋಹವಾಗಿದೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗುತೂರಿಸುತ್ತಾ ಬಂದಿ‍ದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರ್ಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ ಎಂದರು.

ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ ಇಂತಹ ನಡವಳಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

7 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

11 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

11 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

16 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago