ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ರಾಜ್ಯದ 236 ತಾಲೂಕುಗಳಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು.
ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.
ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು.
ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.
ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು.
ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…