ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ- ರಾಜ್ಯದ ಬರ ಪರಿಸ್ಥಿತಿಯನ್ನ ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದ 236 ತಾಲೂಕುಗಳಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು.

ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.

ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು.

ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು.

ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

8 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

13 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

16 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago