ಪ್ರಧಾನಿ ನರೇಂದ್ರ ಮೋದಿ ಬೇಸಿಕ್ ಎಕನಾಮಿಕ್ಸ್ ಕೂಡ ತಿಳಿದಿಲ್ಲ: ಬಡವರ ಅನ್ನವನ್ನು ಪ್ರಧಾನಿ ಮೋದಿ ಕಿತ್ತುಕೊಂಡಿದ್ದಾರೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಟೀಕೆ

ಬಡವರ ಕೈಗೆ ಹಣ ಕೊಟ್ಟರೆ ಅದು ದ್ವಿಗುಣವಾಗುತ್ತದೆ. ಆದರೆ ಶ್ರೀಮಂತರಿಗೆ ಕೊಟ್ಟರೆ ದಾಸ್ತಾನು ಆಗುತ್ತದೆ. ಇದಕ್ಕೆ ಶಕ್ತಿ ಯೋಜನೆಯೆ ಸಾಕ್ಷಿ. ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳ ಲಾಭ ಹೆಚ್ಚಾಗ್ತಿದೆ. ಇದರ ಕುರಿತು ಬೆಸಿಕ್ ಎಕನಾಮಿಕ್ಸ್ ಕೂಡ ಪ್ರಧಾನಿ ಮೋದಿಗೆ ಅರ್ಥವಾಗಲ್ಲ. ನಾವು ಕೊಟ್ಟಿರುವ ಎಲ್ಲಾ ಆಶ್ವಾಸನೆ ಈಡೇರಿಸುತ್ತೇವೆ. ಅವರಿಗೆ ಕೇವಲ ಲೂಟಿ ಮಾಡುವುದಷ್ಟೆ ಗೊತ್ತಿರುವುದು ಎಂದು ಟೀಕೆ ಮಾಡಿದರು.

ನಗರದ ಪ್ರವಾಸಿ ಮಂದರದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ನಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನಾವು ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ದೇಶದ ಜನಸಾಮಾನ್ಯರ ಖಾತೆಗೆ 15 ಲಕ್ಷ ರೂ. ಜಮೆ ಮಾಡುತ್ತೇವೆ ಎಂದು ಹೇಳಿ ಈವರೆಗೆ ಮಾಡಿಲ್ಲ. ಉದ್ಯೋಗ ಸೃಷ್ಟಿಸಲಿದ್ದೇವೆ ಎಂದು ಹೇಳಿ ಇದ್ದ ಕೆಲಸಗಳನ್ನು ಕೂಡ ಕಿತ್ತಿಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರದಿಂದ ಬೇಸತ್ತ ಜನ ಬಿಜೆಪಿಯನ್ನು ಮಕಾಡೆ ಮಲಗಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ 2030ರ ವೇಳೆಗೆ ಹಸಿವು ಮುಕ್ತ ದೇಶ ನಿರ್ಮಾದ ನಿರ್ಣಯವಾಗಿದ್ದು. ಈ ನಿರ್ಣಯಕ್ಕೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಹಿ ಹಾಕಿದ್ದಾರೆ. ಇದು ನಮ್ಮ ದೇಶದಲ್ಲಿಯೂ ಜಾರಿ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿಗೆ ತರಲಾಗಿದೆ. ಎಫ್ ಸಿ ಐನವರು ಗೋಡಾನ್ ನಲ್ಲಿ 29.5 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ದರಿಂದಲೇ ಅನುಮತಿ ನೀಡಿತ್ತು. ಆದರೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನ್ನವನ್ನು ಕಿತ್ತುಕೊಂಡಿದ್ದಾರೆ. ಬಡವರ ಅಕ್ಕಿಯನ್ನು ಮದ್ಯದ ಪ್ರಾಡಕ್ಟ್ ಎಥನಾಲ್ ತಯಾರಿಸಲು ಬಳಸುತ್ತಿದ್ದಾರೆ. ಆದರೆ ಜನರಿಗೆ ನೀಡಲು ಪ್ರಧಾನಿ ಮೋದಿ, ಅಮಿತ್ ಶಾಗೆ ಮನಸ್ಸು ಬರಲಿಲ್ಲ ಕಿಡಿಕಾರಿದರು.

ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಗಳನ್ನು ನಿಗದಿತ ಅವಧಿಯಲ್ಲಿಯೇ ಜನರಿಗೆ ತಲುಪಿಸುತ್ತೇವೆ. ಈಗಾಗಲೇ ಎರಡು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಆದರೆ ಕೇಂದ್ರ ಸರ್ಕಾರದ ಪ್ರಧಾನಿ ಮೋದಿ ಕೇವಲ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ, ಕೇಂದ್ರ ಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದರು.

ಎತ್ತಿನಹೊಳೆ ಯೋಜನೆ ಬಿಜೆಪಿ, ಜೆಡಿಎಸ್ ನವರಿಗೆ ರಾಜಕೀಯದಾಳ:

ಕಾಂಗ್ರೆಸ್ ಸರ್ಕಾರ ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನವನ್ನು ಕಾಲಮಿತಿಯಲ್ಲಿ ಬಿಡುಗಡೆ ಮಾಡಿ ಯೋಜನೆ ಕಾರ್ಯಗತಕ್ಕೆ ಶ್ರಮಿಸಿದೆ. ಬಿಜೆಪಿ, ಜೆಡಿಎಸ್ ನವರು ಟೀಕೆ ಮಾಡುವುದರಲ್ಲೇ ಕಾಲಕಳೆದು, ಚುನಾವಣಾ ವೇಳೆ ರಾಜಕೀಯ ದಾಳವನ್ನಾಗಿ ಮಾಡಿಕೊಂಡಿವೆ ಎಂದರು.

ಇನ್ನೂ ಎರಡು ಎಂಪಿ ಚುನಾವಣೆಗೆ ಸ್ಪರ್ಧಿಸಬಲ್ಲೆ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ವೀರಪ್ಪ ಮೊಯ್ಲಿ ಅವರು ನನ್ನಲ್ಲಿ ಇನ್ನೂ ಎರಡು ಚುನಾವಣೆ ಅಂದರೆ 10 ವರ್ಷ ಕೆಲಸ ಮಾಡುವಷ್ಟು ಮಾನಸಿಕ, ದೈಹಿಕ ಶಕ್ತಿ ಎರಡು ಇದೆ. ಪಕ್ಷಕ್ಕಾಗಿ ದುಡಿದ ಯಾರಿಗೆ ಟಿಕೆಟ್ ನೀಡಿದರು ಸ್ವಾಗತ ಎಂದರು.

ಈ ವೇಳೆ ಮಾಜಿ‌ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

10 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

11 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

13 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

18 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

22 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago