ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಕೆಲಸ ಪ್ರಾರಂಭಿಸಿದ್ದಾರೆ. ನಿನ್ನೆಯಷ್ಟೇ(ಜೂ.09) ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ಇಂದು ಪ್ರಧಾನಿ ಕಚೇರಿಗೆ ಆಗಮಿಸಿ ಮೊಟ್ಟಮೊದಲಿಗೆ ರೈತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ರೈತರ ಖಾತೆಗೆ ಒಟ್ಟು 20,000 ಕೋಟಿ ರೂಪಾಯಿ ಜಮೆ ಮಾಡಲಾಗಿದೆ. ಕಿಸಾನ್ ನಿಧಿ ಸಮ್ಮಾನ್ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದಾರೆ. ಬರೋಬ್ಬರಿ 9.3 ಕೋಟಿ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಜಮೆ ಮಾಡಿದ್ದಾರೆ.
ರೈತರಿಗೆ ಸಹಾಯ ಮಾಡುವ ಈ ಯೋಜನೆಯ 16 ಕಂತುಗಳಲ್ಲಿ ಇದುವರೆಗೆ 12 ಕೋಟಿ 33 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ 3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಡಿಬಿಟಿ ಮೂಲಕ ನೇರವಾಗಿ ವಿತರಿಸಲಾಗಿದೆ.
ಕಡತಕ್ಕೆ ಸಹಿ ಹಾಕಿದ ನಂತರ ಪ್ರಧಾನಿ ಮೋದಿ ಮಾತನಾಡಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರವಾಗಿದೆ. ಆದ್ದರಿಂದ ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತ ರೈತ ಕಲ್ಯಾಣಕ್ಕೆ ಸಂಬಂಧಿಸಿದೆ. ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಕೆಲಸ ಮಾಡಬೇಕೆಂದು ಬಯಸುತ್ತೇವೆ ಎಂದು ಹೇಳಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…