“ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಈ ಬಾರಿ ಬಹುಮತ ಸಿಗದ ಕಾರಣ ಪ್ರಧಾನಿಯಾಗಿ ಮತ್ತೆ ಅಧಿಕಾರಕ್ಕೆ ಏರಲು ಮುಂದಾಗಬಾರದು. ಅವರೇ ಅಧಿಕಾರದಿಂದ ಕೆಳಗಿಳಿಯಬೇಕು. ಸ್ವಾಭಿಮಾನಿ ನಾಯಕರಾದವರು ಅಧಿಕಾರದಿಂದ ಕೆಳಗಿಳಿಯಬೇಕು, ಯಾರೋ ಬಲವಂತವಾಗಿ ಹೊರ ಹಾಕುವವರೆಗೆ ಕಾಯಬಾರದು” ಎಂದು ಬಿಜೆಪಿ ನಾಯಕ ಹಾಗೂ ಪ್ರಧಾನಿ ಮೋದಿಯವರ ಕಟು ಟೀಕಾಕಾರ ಸುಬ್ರಮಣಿಯನ್ ಸ್ವಾಮಿ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ವ್ಯಂಗ್ಯವಾಡಿದ್ದಾರೆ.
2019 ರ ಚುನಾವಣೆಯಲ್ಲಿ ಸ್ವಂತ ಬಲದಿಂದ 303 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ. ಈ ಚುನಾವಣೆಯಲ್ಲಿ 240 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 63 ಸ್ಥಾನಗಳ ನಷ್ಟ ಅನುಭವಿಸಿದೆ. ಹೀಗಾಗಿ ಕೇಂದ್ರದಲ್ಲಿ ಸರ್ಕಾರ ರಚಿಸಲು ಮೈತ್ರಿಯನ್ನೇ ನೆಚ್ಚಿಕೊಳ್ಳಬೇಕಾದ ಪರಿಸ್ಥಿತಿ ಬಿಜೆಪಿಗೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸುಬ್ರಮಣಿಯನ್ ಸ್ವಾಮಿಯನ್ನು ಟೀಕಿಸಿದ್ದಾರೆ.