ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ: ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ: ಮನವಿ ಪತ್ರದಲ್ಲಿನ ಪ್ರಮುಖ ಯೋಜನೆಗಳ ಮಾಹಿತಿ ಹೀಗಿದೆ..

ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು ಮನವಿ ಮಾಡಿದರು.

ಪ್ರಧಾನಿಗಳಿಗೆ ನೀಡಿದ ಮನವಿ ಪತ್ರದಲ್ಲಿನ ಪ್ರಮುಖ ಯೋಜನೆಗಳ ಮಾಹಿತಿ ಹೀಗಿದೆ:

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9,000 ಕೋಟಿ ರೂ.ಗಳ ಡಿ.ಪಿ.ಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದ್ದು, ಸದರಿ ಯೋಜನೆಯ ಬಗ್ಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸಬೇಕೆಂದು ಕೋರಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಬಜೆಟ್ 2023-2024 ರಲ್ಲಿ ಘೋಷಿಸಿದಂತೆ 5,300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಲಾಯಿತು. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3,000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವುದು.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ 44.65 ಕಿಮೀ ಗಳನ್ನು ರೂ.15,611 ಕೋಟಿ ವೆಚ್ಚದ ಡಿಪಿಆರ್ ನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವುದು.

73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವುದು.

15ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6,000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವುದು.

ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3,200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸುವುದು.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವುದು.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 3,000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು, ಕೇಂದ್ರ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ ಧನಸಹಾಯ ನೀಡುವುದು.

15ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ ರೂ.5,495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಕಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ.

ಸದೃಢ ಕರ್ನಾಟಕದ ಮೂಲಕ‌ ಸಶಕ್ತ ಭಾರತ ನಿರ್ಮಾಣದ ಸಂಕಲ್ಪ ನಮ್ಮ ಸರ್ಕಾರದ್ದಾಗಿದೆ. ಇದಕ್ಕೆ ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂಬ ಪೂರ್ಣ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

3 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

7 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

18 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

19 hours ago

ಸಚಿವ ಕೆ.ಎಚ್.ಮುನಿಯಪ್ಪವರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡಿಲ್ಲ- ಯೂತ್ ಕಾಂಗ್ರೆಸ್ ಸ್ಪಷ್ಟನೆ

ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…

20 hours ago

ಜೈಲಿನಲ್ಲಿ ದರ್ಶನ್ ಗೆ ನರಕಯಾತನೆ: “ನಾನು ಬಿಸಿಲು ನೋಡಿ 30 ದಿನಗಳಾಗಿವೆ- ಕೈ ಎಲ್ಲಾ ಫಂಗಸ್ ಬಂದಿದೆ- ನನಗೆ ಪಾಯಿಸನ್ ಕೊಡಿ”- ಜಡ್ಜ್ ಬಳಿ ದರ್ಶನ್ ಮನವಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು…

1 day ago