Categories: ಕೋಲಾರ

ಪ್ರಧಾನಿ ಮೋದಿ ಹೆಸರು ಎಫ್ಸ್ ಟೀನ್ ಫೈಲ್‌ನಲ್ಲಿ ಉಲ್ಲೇಖ ಯುವ ಕಾಂಗ್ರೆಸ್ ಪ್ರತಿಭಟನೆ

ಕೋಲಾರ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು ಎಫ್ಸ್ ಟೀನ್ ಫೈಲ್ ನಲ್ಲಿ ಉಲ್ಲೇಖಿಸಲಾಗಿದ್ದು ಭಾರತ ದೇಶದ ಘನತೆ ಮತ್ತು ಗಾಂಭೀರ್ಯತೆಗೆ ಕಪ್ಪು ಚುಕ್ಕೆ ತಂದಿದ್ದಾರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆಫ್ರೀದ್ ನೇತೃತ್ವದಲ್ಲಿ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು

ಈ ಸಂದರ್ಭದಲ್ಲಿ ಆಫ್ರೀದ್ ಮಾತನಾಡಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ರವರು ಟ್ರಂಪ್ ಜೊತೆ ಮತ್ತು ಎಫ್ಸ್ ಟೀನ್ ಜೊತೆ ಸಂಬಂಧ ಏನು ಅಂತ ಕೂಡಲೇ ಉತ್ತರ ಕೊಡಬೇಕು ಪ್ರಧಾನಿ ಬೇರೆ ದೇಶದ ಅಧ್ಯಕ್ಷರ ಮುಂದೆ ಕುಣಿತಾರೆ ಅಂದ್ರೆ ನಮ್ಮ ದೇಶಕ್ಕೆ ಅಗೌರವ ತಂದಿದ್ದಾರೆ ಮೋದಿ ಬಂಡವಾಳಶಾಹಿ ಪರವಾಗಿದ್ದಾರೆ ಅದಕ್ಕಾಗಿ ದೇಶವನ್ನು ಮಾರಾಟ ಮಾಡಲು ಸಂಚು ರೂಪಿಸಿದ್ದಾರೆ ಇದಕ್ಕೆ ಕಾಂಗ್ರೆಸ್ ಪಕ್ಷವು ಬಿಡುವುದಿಲ್ಲ ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಾಧಿಕ್ ಮಾತನಾಡಿ ಎಫ್ಸ್ ಟೀನ್ ಅನ್ನುವವನು ಕಾಮಕ ಕಡಿಮೆ ವಯಸ್ಸಿನ ಮಕ್ಕಳಿಗೆ ಅತ್ಯಾಚಾರ ಮಾಡಿದವನು ಅಂತವರ ಜೊತೆ ಮೋದಿ ಕೈ ಜೋಡಿಸ್ತಾರೆ ಅಂದ್ರೆ ನಮ್ಮ ದೇಶಕ್ಕೆ ತುಂಬಾ ಅವಮಾನ ಆಗುತ್ತೆ ಕೂಡಲೇ ಇದರ ಬಗ್ಗೆ ಉತ್ತರ ಕೊಡಬೇಕು ಇಲ್ಲದಿದ್ದರೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಉಪಾಧ್ಯಕ್ಷ ತೌಫಿಕ್ ಅನ್ವರ್, ಕೋಲಾರ ತಾಲ್ಲೂಕು ಅಧ್ಯಕ್ಷ ಸುಹೈಲ್, ಶ್ರೀನಿವಾಸಪುರ ಅಧ್ಯಕ್ಷ ಮನೋಹರ್, ಮುಳಬಾಗಿಲು ಅಧ್ಯಕ್ಷ ಸೂರಿ, ಕೋಲಾರ ನಗರ ಅಧ್ಯಕ್ಷ ಅರ್ಬಾಜ್, ಗ್ರಾಮಾಂತರ ಅಧ್ಯಕ್ಷ ಬರ್ಕತ್, ಅಭಿಷೇಕ್, ಯುವ ಮುಖಂಡರಾದ ಯತೀಶ್ ನಾಯ್ಡು,ಮನ್ಸೂರ್, ನೂರ್, ಬಾಬರ್ ಷಮ್ಸ್, ನಿಜಾಮುದ್ದೀನ್ ಮುಂತಾದವರು ಇದ್ದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

11 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

15 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

18 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

20 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago