ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ನೋಂದಣಿಗೆ ದಿನಾಂಕ ನಿಗದಿ: ಆಗಸ್ಟ್ 16ಕ್ಕೆ ಕೊನೆ ದಿನ

2023 ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ.

ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು. ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ನಷ್ಟ ಪರಿಹಾರವನ್ನು ಒದಗಿಸುವುದು ಯೋಜನೆಯ ಪ್ರಮುಖ ಅಂಶಗಳಾಗಿರುತ್ತವೆ.

ಪ್ರಸ್ತುತ ವಿಮಾ ನೋಂದಣಿ ಪ್ರಗತಿಯಲ್ಲಿದ್ದು, ಜಿಲ್ಲೆಯ ಅಧಿಸೂಚಿತ ಬೆಳೆಗಳಾದ ತೊಗರಿ (ಮಳೆಯಾಶ್ರಿತ ಮತ್ತು ನೀರಾವರಿ), ಹುರುಳಿ ನೆಲಗಡಲೆ (ಮಳೆಯಾಶ್ರಿತ) ಮತ್ತು ಟೊಮ್ಯಾಟೊ ಬೆಳೆಗಳಿಗೆ ವಿಮೆಗೆ ನೋಂದಾಯಿಸಲು ಅಂತಿಮ ದಿನಾಂಕ ಮುಗಿದಿದ್ದು, ಉಳಿದಂತೆ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ), ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ಹುರುಳಿ (ಮಳೆಯಾಶ್ರಿತ) ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನಾಂಕವಾಗಿದೆ.

ಅಂತಿಮ ದಿನದವರೆಗೆ ಕಾಯದೆ ವಿಮೆಗೆ ನೋಂದಾಯಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ರೈತರು ಹತ್ತಿರದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (Common Service Centre), ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳುವುದು.

ಹೆಚ್ಚಿನ ವಿವರಗಳಿಗೆ

ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿ ನಿಧಿಯನ್ನು ಸಂಪರ್ಕಿಸಬಹುದಾಗಿದೆ. ಆಯ್ಕೆಯಾಗಿರುವ ವಿಮಾ ಸಂಸ್ಥೆ ರಿಲಯನ್ಸ್ ಜನರಲ್ ಇನ್ಶ್ಯೂರನ್ಸ್ ಕಂಪನಿ ಲಿ., (ಟೋಲ್ ಪ್ರೀ ನಂ: 1800 102 4088)
ವಿಮಾ ಸಂಸ್ಥೆಯ ಪ್ರತಿನಿಧಿಗಳ ದೂರವಾಣಿ ಸಂಖ್ಯೆ- ಜಿಲ್ಲಾ ಪ್ರತಿನಿಧಿ: ಸೋಮನಾಥ್ ಕನಗಲ್: +918655952074, ದೇವನಹಳ್ಳಿ ಕಾಂತಕುಮಾರ್ : 9341627547, ದೊಡ್ಡಬಳ್ಳಾಪುರ ರವಿಶಂಕರ್ : 9620838348, ಹೊಸಕೋಟೆ: ಶ್ರೀನಿವಾಸ ಮೂರ್ತಿ 9900450778,
ನೆಲಮಂಗಲ ಕುಮಾರಸ್ವಾಮಿ : 8618812813.

ವಿಶೇಷ ಸೂಚನೆ

ರೈತರು ಅಂದಾಜು / ಅಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೆ ವಿಮೆಗೆ ನೋಂದಾಯಿಸಿಕೊಳ್ಳಬಹುದು ಹಾಗೂ ಬಿತ್ತನೆ ದೃಡೀಕರಣದ ಅವಶ್ಯಕತೆ ಇರುವುದಿಲ್ಲ. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗದಿಪಡಿಸಿದ ಅವಧಿಯೊಳಗಾಗಿ ತಾವು ನೋಂದಾಯಿಸಿದ ಕೇಂದ್ರಗಳಿಗೆ ತೆರಳಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

5 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

7 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

9 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

11 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

16 hours ago