ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತರಲಾಗಿದ್ದು 2025-26ನೇ ಸಾಲಿಗೆ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕೃಷಿ ಇಲಾಖೆ ತಿಳಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಇದುವರೆಗೆ 836 ರೈತರು ‘ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ’ ನೋಂದಣಿ ಮಾಡಿಕೊಂಡಿದ್ದಾರೆ. ದೇವನಹಳ್ಳಿ ತಾಲ್ಲೂಕಿನಲ್ಲಿ 209, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 365, ಹೊಸಕೋಟೆ ತಾಲ್ಲೂಕಿನಲ್ಲಿ 191, ನೆಲಮಂಗಲ ತಾಲ್ಲೂಕಿನಲ್ಲಿ 71 ರೈತರು ಮಾತ್ರ ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಭವಿಷ್ಯದಲ್ಲಿ ಅತಿವೃಷ್ಟಿ ಅನಾವೃಷ್ಟಿ ಆದಲ್ಲಿ ಬೆಳೆ ವಿಮೆ ರೈತರ ಕೈ ಹಿಡಿಯಲಿದೆ. ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ.

ಕಳೆದ ಸಾಲಿನಲ್ಲಿ ಈ ಯೋಜನೆಗೆ ಜಿಲ್ಲೆಯಲ್ಲಿ ಒಟ್ಟು 5710 ರೈತರು ನೋಂದಣಿ ಮಾಡಿಸಿಕೊಂಡಿದ್ದು, ಅದರಲ್ಲಿ 1770 ರೈತರಿಗೆ ರೂ,79 ಲಕ್ಷ ಪರಿಹಾರ ವಿಮೆ ದೊರೆತಿದೆ.

ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ ಎಂಬುದನ್ನು ನೋಡುವುದಾದರೆ ರಾಗಿ (ಮಳೆಯಾಶ್ರಿತ) ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 340 ಪಾವತಿಸಿದರೆ ವಿಮಾ ಮೊತ್ತ 17000 ಪಡೆಯಬಹುದು.

ರಾಗಿ (ನೀರಾವರಿ ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 406 ಪಾವತಿಸಿದರೆ ವಿಮಾ ಮೊತ್ತ 20300 ಪಡೆಯಬಹುದು.

ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 746 ಪಾವತಿಸಿದರೆ ವಿಮಾ ಮೊತ್ತ 37300 ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 452 ಪಾವತಿಸಿದರೆ ವಿಮಾ ಮೊತ್ತ 22600 ಪಡೆಯಬಹುದು.

ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 516 ಪಾವತಿಸಿದರೆ ವಿಮಾ ಮೊತ್ತ 25800 ಪಡೆಯಬಹುದು.

ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 164 ಪಾವತಿಸಿದರೆ ವಿಮಾ ಮೊತ್ತ 8200 ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 436 ವತಿಸಿದರೆ ವಿಮಾ ಮೊತ್ತ 21800 ಪಡೆಯಬಹುದು.

ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 384 ಪಾವತಿಸಿದರೆ ವಿಮಾ ಮೊತ್ತ 19200 ಪಡೆಯಬಹುದು.

ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 402 ಪಾವತಿಸಿದರೆ ವಿಮಾ ಮೊತ್ತ 20100 ಪಡೆಯಬಹುದು.

ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 1132 ಪಾವತಿಸಿದರೆ ವಿಮಾ ಮೊತ್ತ 56600 ಪಡೆಯಬಹುದು.

ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಫ್ಯಾಕ್ಸ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಿ.ಎಚ್.ಸಿ ನಾಗರಿಕ ಸೇವಾಕೆಂದ್ರ ಹಾಗೂ ಬ್ಯಾಂಕ್ ಗಳಲ್ಲಿ ರೈತರು ಅಗತ್ಯ ದಾಖಲೆಗಳಾದ ವಿಮಾ ಪ್ರಸ್ತಾವನೆ, ಪಹಣಿ, ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಕಾರ್ಡ್ ನೊಂದಿಗೆ ನೋಂದಾಯಿಸಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

12 minutes ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

59 minutes ago

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

2 hours ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

3 hours ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

13 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

17 hours ago