ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.
ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ, ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.
ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.
ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.
ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…