ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ  ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.

ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ,  ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.

ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.

ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.

ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

4 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

8 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

10 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

10 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

12 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

16 hours ago