ಹೊಸ ವರ್ಷದ ಮೊದಲ ದಿನವೇ ಜಪಾನ್ ಭೂಕಂಪನಗಳಿಂದ ನಲುಗಿಹೋಗಿದೆ. ಕನಿಷ್ಠ 115 ಬಾರಿ ಸರಣಿ ಭೂಮಿ ಕಂಪಿಸಿದೆ ಎನ್ನಲಾಗಿದೆ. ಭೂಕಂಪನದಿಂದ ಸುಮಾರು 12 ಮಂದಿ ಸಾವನ್ನಪ್ಪಿದ್ದು, 32 ಸಾವಿರಕ್ಕೂ ಅಧಿಕ ಮಂದಿ ಸಂತ್ರಸ್ಥರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂ ಕಂಪನದ ಕೇಂದ್ರ ಬಿಂದು ವರದಿಯಾಗಿದೆ.
ಬದುಕುಳಿದವರ ಹುಡುಕಾಟದಲ್ಲಿ ರಕ್ಷಣಾ ತಂಡ ನಿರತವಾಗಿದೆ ಎಂದು ಹೇಳಲಾಗಿದೆ. ಭೂಕಂಪನದಿಂದ ಸಾಕಷ್ಟು ಆಸ್ತಿಪಾಸ್ತಿಗಳಿಗೆ ನಷ್ಟವಾಗಿದ್ದು, ಕಟ್ಟಡ, ರಸ್ತೆಗಳು, ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಎಲ್ಲವೂ ನೆಲಕ್ಕೆ ಉರಿಳಿವೆ.