ಪ್ರಯೋಗಾಲಯ ಆಲೋಚನಾ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ-ಪ್ರಾಂಶುಪಾಲ ಜಿ.ದಯಾನಂದ್

ವಿಜ್ಞಾನದ ವಿಷಯಗಳಲ್ಲಿ ಬರುವ ಹಲವಾರು ಸಿದ್ಧಾಂತಗಳನ್ನು ಪ್ರಯೋಗಗಳ ಸಹಾಯದಿಂದ ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಕೇಳಿ ಕಲಿಯುವುದಕ್ಕಿಂತ ನೋಡಿ ಕಲಿಯುವುದು ಉತ್ತಮ, ನೋಡಿ ಕಲಿಯುವುದಕ್ಕಿಂತ ಮಾಡಿ ಕಲಿಯುವುದು ಇನ್ನೂ ಉತ್ತಮ ಎಂಬುದನ್ನು ಸಾಬೀತು ಮಾಡಲು ಪ್ರಯೋಗಾಲಯಗಳು ಸಹಕಾರಿ ಆಗುತ್ತವೆ ಎಂದು ಪ್ರಾಂಶುಪಾಲ ಜಿ.ದಯಾನಂದ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಮುಸಾಶಿ ಕಂಪನಿಯ  ನೆರವಿನೊಂದಿಗೆ ನಿರ್ಮಾಣವಾಗಿರುವ ನೂತನ ವಿಜ್ಞಾನ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಯೋಗಾಲದ ವೀಕ್ಷಣೆಯೂ ವಿದ್ಯಾರ್ಥಿಗಳಲ್ಲಿ  ಆಲೋಚನಾ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.  ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ಯೋಚಿಸುವ, ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಳ್ಳುವ ಪ್ರವೃತ್ತಿ ಬೆಳೆಯುತ್ತದೆ ಎಂದರು.

ಶೈಕ್ಷಣಿಕ ವಿಷಯಗಳಲ್ಲಿ ವಿಜ್ಞಾನ ಕಲಿಕೆಯು ಮಹತ್ವದ ಸ್ಥಾನ ಪಡೆದುಕೊಂಡಿದೆ. ವಿಜ್ಞಾನ ಕೇವಲ ಮಾಹಿತಿಗಷ್ಟೇ ಸಿಮೀತವಾಗಿಲ್ಲ. ವಿಜ್ಞಾನ ನಮ್ಮ ವೈಜ್ಞಾನಿಕ ಆಲೋಚನೆಯನ್ನು ಉತ್ತೇಜಿಸುತ್ತದೆ. ವಿಜ್ಞಾನದ ಪ್ರಗತಿಯಿಂದ ಸುಲಭ ಜೀವನ ನಿರ್ವಹಣೆಗೆ   ಅನುಕೂಲವಾಗುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಮೂಡಿಸಲು ಮುಂದಾಗಬೇಕು.  ವಿಜ್ಞಾನದ ಹಲವು ಪ್ರಯೋಗಗಳಿಗೆ ಪ್ರಾತ್ಯಕ್ಷಿಕೆ ನೀಡಿದಾಗ  ವಿದ್ಯಾರ್ಥಿಗಳು ಸುಲಭವಾಗಿ ಅರ್ಥ ಮಾಡಿಕೊಳ್ಳಲು   ಸಾಧ್ಯವಾಗುತ್ತದೆ ಎಂದರು.

ಮುಸಾಶಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೆತಗೊವಾ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳು ದೊರೆತಾಗ ಮಾತ್ರ ಅವರಿಗೆ ಉತ್ತಮ ಶಿಕ್ಷಣ ದೊರೆಯುತ್ತದೆ. ಗ್ರಾಮೀಣ ಭಾಗದ ಪದವಿ ಪೂರ್ವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸಾಶಿ ಕಂಪನಿಯಿಂದ ಪ್ರಯೋಗಾಲಯ ನಿರ್ಮಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಪ್ರಯೋಗಾಲಯದ ಸದುಪಯೋಗವನ್ಬು ಪಡೆದುಕೊಂಡು ಶೈಕ್ಷಣಿಕ ಪ್ರಗತಿಯನ್ನು ಹೊಂದಬೇಕು ಎಂದರು.

ಕಾರ್ಯಕ್ರಮದಲ್ಲಿ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಗ್ರೇಸ್ ವಿನುತಾ,  ಉಪನ್ಯಾಸಕರುಗಳಾದ ನಾಗಪ್ಪಗೌಡ, ಅರ್ಚನಾ, ಕಲ್ಪನಾ,  ನಂದಕುಮಾರ್, ಮುಸಾಶಿ ಕಂಪನಿಯ ಉಪಾಧ್ಯಕ್ಷ ವೆಂಕಟೇಶ್ವರಲು, ಹಿರಿಯ ವ್ಯವಸ್ಥಾಪಕ ಸುದರ್ಶನರೆಡ್ಡಿ, ಯೋಜನಾ ನಿರ್ದೇಶಕ ಸುಧಾಕರ್, ನಿರ್ದೇಶಕ ಶಿವಕುಮಾರ್  ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

8 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

21 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

21 hours ago