ಪ್ರವರ್ಗ-2ಎ ಅಡಿ ಮೀಸಲಾತಿಗಾಗಿ ಪಂಚಮಸಾಲಿ ಲಿಂಗಾಯತ ಸಮುದಾಯ ಬೇಡಿಕೆ ವಿಚಾರ: ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು- ಸಿಎಂ ಸಿದ್ದರಾಮಯ್ಯ

ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು.

ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು ಎಂದರು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದು ಹೇಳಿದರು.

ಹಿಂದಿನ ಸರ್ಕಾರ ಸಮುದಾಯದ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ  ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಂಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಂಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.

ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ. ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿದೆ ಎಂದರು.

ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿದೆ ಎಂದು ಹೇಳಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್,  ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 hour ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

3 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

4 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

6 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

11 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

1 day ago