ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ: ವಿದ್ಯಾರ್ಥಿ ಸಾವು: ಹಲವರಿಗೆ ಗಾಯ

​ಹೊನ್ನಾವರ: ಮೈಸೂರಿನಿಂದ ಪ್ರವಾಸಕ್ಕೆಂದು ಹೊನ್ನಾವರಕ್ಕೆ ಬರುತ್ತಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ಸುಳೆ ಮುರ್ಕಿ ಕ್ರಾಸ್ ಬಳಿ ನಡೆದಿದೆ.

​ಮೃತ ದುರ್ದೈವಿ ವಿದ್ಯಾರ್ಥಿಯನ್ನು ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಪವನ್ (15) ಎಂದು ಗುರುತಿಸಲಾಗಿದ್ದು, ಈತ 10ನೇ ತರಗತಿ (SSLC) ಓದುತ್ತಿದ್ದನು.
​
ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಶಾಲಾ ಬಸ್ ಮೂಲಕ ಪ್ರವಾಸಕ್ಕಾಗಿ ಹೊನ್ನಾವರಕ್ಕೆ ಆಗಮಿಸುತ್ತಿದ್ದರು. ಹೊನ್ನಾವರದ ಸುಳೆ ಮುರ್ಕಿ ಕ್ರಾಸ್ ಬಳಿ ಬರುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.

​ಘಟನೆಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

5 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

9 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

11 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

22 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

1 day ago