ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ತರಬೇತಿ ಹಂತದಲ್ಲಿ ಒದಗಿಸುವ ಸೌಲಭ್ಯಗಳು :

ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸ ಕಾತರಿಯಾಗಿರುವುದು.
ತರಬೇತಿ ಪಡೆಯುವ ವೇಳೆ ರೂ.2000/- ಗಳು ಮಾಹೆಯಾನ ಸ್ಟೈಪೆಂಡ್ ನೀಡಲಾಗುವುದು.
ತರಬೇತಿ ಹಾಜರಾಗುವವರಿಗೆ ವಸತಿ, ಊಟ ಹಾಗೂ ಯೂನಿಫಾರ್ಮ್ ನೀಡಲಾಗುವುದು.

ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸದ ನೈಜ ಅನುಭವ ಸಹ ನೀಡಲಾಗುವುದು.
IHM,ಬೆಂಗಳೂರು ಹಾಗೂ FCI ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಆತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಸರ್ಟಿಫಿಕೇಟ್ ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.

ತರಬೇತಿಗಳು:

1. Food and Beverage Service Steward) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು,SSLC ಅಥವಾ ಹತ್ತನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

2. ಬಹು ತಿನಿಸು ಅಡುಗೆ (Multi Cuisine Cook) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 5 ತಿಂಗಳ ತರಬೇತಿಯಿದ್ದು, 8ನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 01 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ:080-22040633 ಇವರನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *