ಪ್ರಸಕ್ತ ವರ್ಷ 06 ದೌರ್ಜನ್ಯ ಪ್ರಕರಣಗಳು ದಾಖಲು

ಪ.ಜಾತಿ, ಪ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರದ ಜೊತೆಗೆ ಶೀಘ್ರ ನ್ಯಾಯ ದೊರಕಿಸುವುದು ಮುಖ್ಯ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ ಮೊದಲನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಪಿಇಎಂಎಸ್ ಮತ್ತು ಆರ್ ಕಾಯ್ದೆ-2013 ರ ಸಮಿತಿ ಸಭೆ ಹಾಗೂ ಎಸ್.ಸಿ.ಪಿ -ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ.ಜಾತಿ,ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡು ಬಂದ ಕೂಡಲೇ ಕಾಯ್ದೆಯಡಿ ಶೀಘ್ರ ಎಫ್ಐಆರ್ ದಾಖಲಿಸಿ, ದಾಖಲಾಗಿರುವ ಪ್ರಕರಣಗಳನ್ನು ಶೀಘ್ರ ತನಿಖೆಗೆ ಒಳಪಡಿಸಿಬೇಕು. ಪ್ರಕರಣಗಳ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ನೀಡುವುದರ ಮೂಲಕ ಸಕಾಲದಲ್ಲಿ ಸಂತ್ರಸ್ತರಿಗೆ ಪರಿಹಾರ ಧನ ನೀಡಬೇಕು. ಪ್ರಕರಣಗಳ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ, ಚಾರ್ಜ್ ಶೀಟ್ ಅಥವಾ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಸಂತ್ರಸ್ತರಿಗೆ ತ್ವರಿತವಾಗಿ ನ್ಯಾಯ ಒದಗಿಸಬೇಕು. ಬೇಗ ನ್ಯಾಯ ಸಿಕ್ಕಿದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿ ದೌರ್ಜನ್ಯ ಪ್ರಕರಣಗಳು ಮರುಕಳಿಸುವುದನ್ನು ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.

ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆ, ಉಪವಿಭಾಗ ಮಟ್ಟದ ಸಭೆಯನ್ನು ಕಡ್ಡಾಯವಾಗಿ ನಡೆಸಿ ತಾಲ್ಲೂಕು ಮಟ್ಟದ, ಉಪವಿಭಾಗ ಮಟ್ಟದ ಕುಂದು ಕೊರತೆಗಳನ್ನು, ಸ್ಥಳೀಯ ಸಮಸ್ಯೆಗಳನ್ನು ನಿಮ್ಮ ಹಂತದಲ್ಲಿಯೇ ಬಗೆಹರಿಸಿ ವರದಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

*6 ದೌರ್ಜನ್ಯ ಪ್ರಕರಣಗಳು ದಾಖಲು*

ದೌರ್ಜನ್ಯ ಪ್ರಕರಣಗಳ ದಾಖಲು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿದ ಅವರು ಪ್ರಸಕ್ತ ವರ್ಷ ಜಿಲ್ಲೆಯಲ್ಲಿ 6 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 06 ಪ್ರಕರಣಗಳಲ್ಲಿ ನೊಂದ 09 ಸಂತ್ರಸ್ತರಿಗೆ ಒಟ್ಟು 6.38 ಲಕ್ಷ ರೂ.ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಪೊಲೀಸ್ ಠಾಣೆಗಳಲ್ಲಿ, ತಾಲ್ಲೂಕು ಹಂತದಲ್ಲಿ ನಡೆಯುವ ಕುಂದು ಕೊರತೆ ಸಭೆಗಳಿಗೆ ಸಮಿತಿ ಸದಸ್ಯರನ್ನು ಆಹ್ವಾನಿಸಿ ಎಂದರು.

*ಸಫಾಯಿ ಕರ್ಮಚಾರಿಗಳಿಗೆ ಜಾಗೃತಿ ಮೂಡಿಸಿ*

ಸಫಾಯಿ ಕರ್ಮಚಾರಿಗಳಿಗೆ ಕೆಲಸದ ಜೊತೆಗೆ ಆರೋಗ್ಯ ಕಾಳಜಿ ಮುಖ್ಯ, ಕೆಲಸದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಕೈ-ಕಾಲಿಗೆ ಗ್ಲೌಸ್, ರಕ್ಷಣಾತ್ಮಕ ಬಟ್ಟೆ ಧರಿಸುವುದರ ಬಗ್ಗೆ ಅರಿವಿರುವುದಿಲ್ಲ.

ಪ್ರತಿ ತಿಂಗಳು ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ ಹಾಗೂ ಕೆಲಸದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಾಗಾರ ಏರ್ಪಡಿಸಿ ಜಾಗೃತಿ ಮೂಡಿಸಿ ಎಂದು ಆರೋಗ್ಯ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ ಯಾಗಬೇಕು. ಅನಿವಾರ್ಯ ಸಂದರ್ಭಗಳಲ್ಲಿ ರಜಾದಿನಗಳನ್ನು ನೀಡಬೇಕು. ನಿವೇಶನ, ಮನೆ ಒದಗಿಸಬೇಕು, ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ವ್ಯಾಪಾರ, ವ್ಯವಹಾರಕ್ಕಾಗಿ ವಿವಿಧ ಕೌಶಲ್ಯ ತರಬೇತಿ, ಮಾರ್ಗದರ್ಶನ ನೀಡಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ ಕಲ್ಪಿಸಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂಬ ಸಮಿತಿ ಸದಸ್ಯರ ಬೇಡಿಕೆಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ನಗರ ಪ್ರದೇಶಗಳಲ್ಲಿ ನಿವೇಶನ, ಮನೆ ಒದಗಿಸಲು ಮೊದಲ ಆದ್ಯತೆಯಾಗಿ ಸಫಾಯಿ ಕರ್ಮಚಾರಿಗಳನ್ನು ಪರಿಗಣಿಸಲಾಗುವುದು, ಕೆಲಸಕ್ಕೆ ಬೇಕಾಗುವ ಅಗತ್ಯ ಪರಿಕರಗಳನ್ನು ಅವರಿಗೆ ಒದಗಿಸಲಾಗುವುದು. ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ವಹಿಸಿ ಸಂಬಂಧಪಟ್ಟ ಕುಟುಂಬಗಳಿಗೆ ಕೌಶಲ್ಯ ತರಬೇತಿ ಜೊತೆಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದರು.

ಬಾಕಿ ಉಳಿದಿರುವ ಎಸ್.ಸಿ.ಪಿ, ಟಿ.ಎಸ್.ಪಿ ಅನುದಾನವನ್ನು ಮಾಸಾಂತ್ಯದೊಳಗೆ ಖರ್ಚು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮಾ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಕೃಷಿ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ, ತೋಟಗಾರಿಕೆ ಉಪನಿರ್ದೇಶಕರಾದ ಗುಣವಂತ, ರೇಷ್ಮೆ ಇಲಾಖೆ ಉಪನಿರ್ದೇಶಕರಾದ ಪ್ರಭಾಕರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು, ಪಿ.ಇ.ಎಂ.ಎಸ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

9 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

19 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago