ಪ್ರಸಕ್ತ ಸಾಲಿನಲ್ಲಿ ವಿದ್ಯುತ್ ಬೇಡಿಕೆ ಶೇ.43ಕ್ಕೆ ಏರಿಕೆ: ವಿದ್ಯುತ್ ಬಳಕೆಯಲ್ಲಿ ಶೇ.45ರಷ್ಟು‌ ಹೆಚ್ಚಾಗಿದೆ- ಸಿಎಂ ಸಿದ್ದರಾಮಯ್ಯ

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ ಎಂದರು.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದರು.

ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

7 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

20 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

21 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

23 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

24 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago